newsics.com/ನ್ಯೂಸಿಕ್ಸ್
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ 50ಕ್ಕೂ ಹೆಚ್ಚು ಮರಗಳು ಉರುಳಿ, ರಸ್ತೆಗಳು ಜಲಾವೃತಗೊಂಡಿದ್ದು, ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದಾರೆ.
https://youtube.com/shorts/A7gPa–K6QY?si=UClQxtCV5fiwGWUd
ಹೆಚ್‌ಎಎಲ್ ಏರ್‌ಪೋರ್ಟ್ ಪ್ರದೇಶದಲ್ಲಿ ಮಾತ್ರವೇ 24.7 ಮಿ.ಮೀ ಮಳೆ ದಾಖಲಾಗಿದೆ. ಬಿರುಗಾಳಿ, ಆಲಿಕಲ್ಲು ಹಾಗೂ ಭಾರೀ ಮಳೆಯಿಂದ ಅನಾಹುತಗಳ ಸರಮಾಲೆ ಸಂಭವಿಸಿದೆ. ಬಿಬಿಎಂಪಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಪ್ರಕಾರ 50 ಸ್ಥಳಗಳಲ್ಲಿ ಮರಗಳು ಉರುಳಿವೆ. ಇದರ ಜತೆಗೆ ಈವರೆಗೆ 8 ಜನ ಮೃತಪಟ್ಟಿರುವ ಮಾಹಿತಿ ಲಭ್ಯವಿದೆ.
ನಗರದ ಬನಶಂಕರಿ, ಸೌತ್ ಎಂಡ್ ಸರ್ಕಲ್, ಜಯನಗರ, ಶಾಂತಿನಗರ, ಯುಬಿ ಸಿಟಿ, ಕಾರ್ಪೋರೇಶನ್ ಪ್ರದೇಶ ಸೇರಿದಂತೆ ಹಲವೆಡೆ ಗುಡುಗು-ಗಾಳಿ ಸಹಿತ ಭಾರೀ ಮಳೆ ಮಾತ್ರವಕ್ಕ ಕಾಶ್ಮೀರದಲ್ಲಿ ಮಂಜು ಇರುವ ರೀತಿಯಲ್ಲಿ ಆಲಿಕಲ್ಲು ಬಿದ್ದಿದೆ. ವಿಧಾನಸೌಧ ಸುತ್ತಮುತ್ತ ಆಲಿಕಲ್ಲು ಮಳೆ ದಾಖಲಾಗಿದ್ದು, ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ಆಲಿಕಲ್ಲುಗಳು ರಾಶಿಯಾಗಿ ಬಿದ್ದಿರುವ ದೃಶ್ಯಗಳು ಕಂಡುಬಂದವು.