Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Almanac & Horoscope 30-04-2026, ಗುರುವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Almanac & Horoscope 30-04-2026, ಗುರುವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

Share
4 Min Read
SHARE

newsics.com/ನ್ಯೂಸ್ 

ಶುಭೋದಯ

30-04-2026, ಗುರುವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ವಸಂತ ಋತು ವೈಶಾಖ ಮಾಸ ಶುಕ್ಲಪಕ್ಷದ ಚತುರ್ದಶಿ.

* ಹುಣ್ಣಿಮೆ ಆರಂಭ

* ಶ್ರೀ ಆದಿ ಶಂಕರಾಚಾರ್ಯರ ಕೈಲಾಸ ಆಗಮನ ದಿನ

* ಶ್ರೀ ನೃಸಿಂಹ ಜಯಂತಿ

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ವಜ್ರ, ಕರಣ : ವಣಿಜ, ಸೂರ್ಯೋದಯ – 06 – 03 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:56 – 15:31, ಯಮಗಂಡ ಕಾಲ 06:03 – 07:38, ಗುಳಿಕ ಕಾಲ 09:13 – 10:47

======

ಮೇಷ

ಯಾವುದನ್ನು ನೀವು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಅಜಾಗರೂಕತೆಯಿಂದ ಹಣವು ಹೋಗುವುದು. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ಸಂತೋಷವಾಗಿ ಇಡಲಾಗದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಕಲಹ. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಆಪ್ತವಾದ ವಿಚಾರಗಳ ಜತೆ ಹೆಚ್ಚು ಚರ್ಚೆ ಮಾಡುವಿರಿ.

ವೃಷಭ 

ನಿಮಗೆ ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳಾಗುವುದು. ಮಾತಿಗೆ ಬೆಲೆಯು ಕಡಿಮೆಯಾದೀತು. ಯಾವುದೋ ಸಣ್ಣ ಜವಾಬ್ದಾರಿಯನ್ನು ಕೊಟ್ಟು ನಿಮ್ಮನ್ನು ಸುಮ್ಮನಿರಿಸುವರು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ಇಂದು ಮನಸ್ಸನ್ನು ಏಕಾಗ್ರ ಮಾಡುವುದು ಕಷ್ಟವಾದೀತು. ತಾಯಿಗೆ ಪ್ರಿಯವಾದುದನ್ನು ಮಾಡುವಿರಿ. ನಿಮ್ಮ ಹೊಣೆಗಾರಿಕೆ ಕಡಿಮೆ ಆದಂತೆ ಅನ್ನಿಸುವುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಿಥುನ 

ಅನಿರೀಕ್ಷಿತವಾಗಿ ಹೆಸರಾಂತ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಎಂದೋ‌ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಅಭ್ಯಾಸ ಮಾಡುವಿರಿ.

ಕರ್ಕಾಟಕ 

ನೀವಿಂದು ನಿಮ್ಮ ಮನಸ್ಸಿಗೆ ಹಿಡಿಸಿದವರನ್ನು ಪ್ರೀತಿಸಲು ಆರಂಭಿಸುವಿರಿ. ಅವಸರದಲ್ಲಿ ಅನಾಹುತವಾದೀತು. ಸಮಾರಂಭದಲ್ಲಿ ದೂರದ ಬಂಧುಗಳ ಸಮಾಗಮ. ನಿಮ್ಮ ಜವಾಬ್ದಾರಿಗಳು ಹೆಚ್ಚಾಗಿ ಅದನ್ನು ಕಳೆದುಕೊಳ್ಳುವ ಆಲೋಚ‌ನೆ‌ಮಾಡುವಿರಿ. ನಿಮ್ಮ ಸಹಾಯ ಪಡೆದವರಿಂದ ಪ್ರತ್ಯುಪಕಾರವಾಗಲಿದೆ. ಉಯಾರದೋ ವೈಯಕ್ತಿಕ ವಿಚಾರಗಳು ನಿಮ್ಮ ದಾಂಪತ್ಯದಲ್ಲಿ ಒಡಕು ತರಬಹುದು. ಅತಿಥಿಗಳ ಆಗಮನದಿಂದ ನಿಮಗೆ ಸಂತೋಷವಾಗಲಿದೆ.

ಸಿಂಹ 

ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಲಿದೆ‌. ಧಾರ್ಮಿಕ ಮುಖಂಡರ ಜೊತೆ ಕಲಹ ಮಾಡಿಕೊಳ್ಳುವಿರಿ. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ಅಲ್ಪಲಾಭವು ಆಗಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಪ್ರಾಮಾಣಿಕತೆಗೆ ಸಿಗುವ ಗೌರವ ಇಲ್ಲವೆನಿಸುವುದು. ಹೂಡಿಕೆಗೆ ನಿಮ್ಮದಾದ ತಂತ್ರವನ್ನು ಬಳಸುವಿರಿ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು.

ಕನ್ಯಾ 

ಪಾಲುದಾರಿಕೆಯಲ್ಲಿ ಕೆಲವನ್ನು ಮುಚ್ಚಿಡುವಿರಿ. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗುವುದು. ಆಂತರಿಕ ಕಲಹವು ಬಹಿರಂಗವಾಗಲಿದೆ. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಟ್ಟುಬಿಡಿ. ಆಂತರಿಕ ಕಲಹವು ಇಂದು ಜಗಜ್ಜಾಹಿರವು ಆಗಬಹುದು. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಯಾರನ್ನೂ ದೂರದಿಂದಲೇ ನಿರ್ಣಯಿಸುವುದು ಬೇಡ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು.

ತುಲಾ 

ನಿಮ್ಮೊಳಗೆ ಭವಿಷ್ಯದ ಹತ್ತಾರು ದ್ವಂದ್ವಗಳು ಇರಲಿವೆ. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಸಾಲ ಕೊಡುವಾಗ ಸ್ವಪ್ರತಿಷ್ಠೆಯನ್ನು ತೋರಿಸುವಿರಿ.‌ ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಹೆಚ್ಚು ಪಡೆದಷ್ಟು ಉತ್ತಮವೇ. ಶ್ರಮದ ಕೆಲಸವು ಆಯಾಸವನ್ನು ತರಲಿದೆ‌. ಆಸೆಯಿಂದ ದುಃಖಿಸ ಏಕಾಗುವುದು. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ.

ವೃಶ್ಚಿಕ 

ನ್ಯಾಯಾಲಯದ ತೀರ್ಪಿನಿಂದ ಅದರ ಬಗ್ಗೆ ಗೌರವ ಕಡಿಮೆಯಾಗಬಹುದು. ತನ್ನವರನ್ನು ಕಳೆದುಕೊಳ್ಳುವ ಹೆದರಿಕೆ ಉಂಟಾಗಲಿದೆ. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಯಾರನ್ನಾದರೂ ಹೇಳಬಾರದ್ದನ್ನು ಬಾಯ್ತಪ್ಪಿನಿಂದ ಹೇಳಿ ಬೇಸರ ಮಾಡಿಸುವಿರಿ. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ವಹಿಸಿಕೊಂಡ ಕಾರ್ಯವನ್ನು ಪೂರ್ಣ ಮಾಡಲು ಸಹೋದ್ಯೋಗಿಗಳ ಸಹಾಯವನ್ನು ಪಡೆಯುವಿರಿ.

ಧನುಸ್ಸು

ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಮುಖಂಡರು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಉದ್ಯಮಿಗಳ ಜೊತೆ ಇಂದು ಕಾಲ ಕಳೆಯುವಿರಿ. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಯಾರ ಮಾತನ್ನೂ ಗಂಭೀರವಾಗಿ ಪರಿಗಣಿಸಲಾರಿರಿ.

ಮಕರ 

ಭೂಮಿಯ ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಭತ್ಯೆಯು ಸಿಗಬಹುದಾಗಿದೆ. ಮನೆಯ ಸದಸ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ನಿಮ್ಮ ಕಾರ್ಯದಲ್ಲಿ ಬರುವ ತೊಂದರೆಯನ್ನು ದೂರಮಾಡಲು ಶಕ್ತರಾಗಿದ್ದೀರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ಯಾರಾದರೂ ಚುಚ್ಚಿ ಮಾತನಾಡಬಹುದು. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ.

ಕುಂಭ 

ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ವಾಹನ ಸಂಚಾರದಿಂದ ತೊಂದರೆ. ಆತುರದಿಂದ ಎಲ್ಲಿರಿಗೂ ಹೋಗುವುದು ಬೇಡ. ಕಲಾವಿದರು ಉತ್ತಮವಾದ ಅವಕಾಶವನ್ನು ಪಡೆಯಲಿದ್ದಾರೆ. ಮಾತು ವಿವಾದವಾಗಿ ದ್ವೇಷದಲ್ಲಿ ಕೊನೆಗೊಳ್ಳಬಹುದು. ಕಾರ್ಯದಲ್ಲಿ ಸಾವಧಾನತೆ ಇರಲಿದೆ. ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ.

ಮೀನ 

ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲತೆ ಇರಲಿದೆ. ಆಪ್ತರ ಭೇಟಿಯಾಗಬಹುದು. ಹಲವು ದಿನಗಳಿಂದ ಹೇಳದೇ ಉಳಿದುಕೊಂಡ ವಿಷಯಗಳನ್ನು ಚರ್ಚಿಸುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ.

 

 

TAGGED:#almanac #zodiac #prediction #30-04-2026 #thursday #horoscope #planetary #positions#ನ್ಯೂಸಿಕ್ಸ್ #newsics #news
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ
Next Article Death During Sleep ಕೆಲವರು ನಿದ್ರೆಯಲ್ಲೇ ಕೊನೆಯುಸಿರೆಳೆಯುವುದೇಕೆ? ಈ ಸಾವಿನ ಹಿಂದಿರುವ ಕಾರಣಗಳೇನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?