newsics.com/ನ್ಯೂಸಿಕ್ಸ್
ಬೆಂಗಳೂರು: ಏಪ್ರಿಲ್ ಅಂತ್ಯ ಹಾಗೂ ಮೇ ಮೊದಲ ವಾರದಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
https://youtube.com/shorts/A7gPa–K6QY?si=UClQxtCV5fiwGWUd
ಭಾರತೀಯ ಹವಾಮಾನ ಇಲಾಖೆ ವರದಿಯ ಪ್ರಕಾರ, ಏಪ್ರಿಲ್ 30 ಮತ್ತು ಮೇ 1 ರಂದು ಮಳೆಯ ಅಬ್ಬರ ಜೋರಾಗಿರಲಿದೆ. ಈ ದಿನಗಳಲ್ಲಿ ಸುಮಾರು 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಜೊತೆಗೆ ಗಂಟೆಗೆ 30 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನ ಈ ಕೆಳಗಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ರಾಮನಗರದಲ್ಲಿ ಮಳೆಯಾಗಲಿದೆ.