newsics.com/ನ್ಯೂಸಿಕ್ಸ್
ಬೆಂಗಳೂರು: ಜೋರಾದ ಗಾಳಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬೆನ್ನಲ್ಲೆ ಬೆಂಗಳೂರಿನಲ್ಲಿ ರಣ ಮಳೆಗೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.
https://youtube.com/shorts/A7gPa–K6QY?si=UClQxtCV5fiwGWUd
ಬೆಂಗಳೂರಿನ ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 30 ರಿಂದ 35 ವರ್ಷದ ವ್ಯಕ್ತಿ ವಿದ್ಯುತ್ ಕಂಬದ ಬಳಿ ಕಂಬ ಹಿಡಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಘಟನೆ ನಡೆದು ಗಂಟೆಗಳಾದರೂ ಸ್ಥಳಕ್ಕೆ ಹೋಗದ KEB ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳಕ್ಕೆ ಜೆ.ಪಿ. ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೌರಿಂಗ್ ಆಸ್ಪತ್ರೆಯ ಗೋಡೆ ಬಿದ್ದ ಸ್ಥಳದಿಂದ 100 ಮೀಟರ್ ಅಂತರದಲ್ಲೇ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಟ್ಟೆ ಖರೀದಿ ಮಾಡಲು ಶಿವಾಜಿನಗರಕ್ಕೆ ತಾಯಿ ಜೊತೆಗೆ ಆಗಮಿಸಿದ್ದ ಸೂಫಿಯನ್ ಎಂಬಾತ ಸಾವನ್ನಪ್ಪಿದ್ದಾನೆ. ಗಾಡಿ ಪಾರ್ಕಿಂಗ್ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದಾರೆ. ಮೃತ ಯುವಕ ಕೆ.ಜಿ. ಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ.
ಇನ್ನು, ಈ ಬಗ್ಗೆ ಮೃತ ಯುವಕ ಸೂಫಿಯನ್ ಸಂಬಂಧಿಕ ಅಮನ್ ಮಾತನಾಡಿ, ಮಗ ಸತ್ತಿರುವ ಸುದ್ದಿ ಕೇಳಿ ತಾಯಿ ಕೂಡ ಆಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ಸೇರಿದ್ದಾರೆ, ಬೌರಿಂಗ್ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
https://www.newsics.com/2026/04/30/a-strong-earthquake-hit-the-country-what-happened-where/