Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಟ್ರೋದಲ್ಲಿ ಮಹಿಳೆಯರ ಅಂಗಾಂಗ ಚಿತ್ರೀಕರಿಸುತ್ತಿದ್ದವಗೆ ಹೈಕೋರ್ಟ್ ಶಾಕ್!
ಕರ್ನಾಟಕಪ್ರಮುಖ

ಮೆಟ್ರೋದಲ್ಲಿ ಮಹಿಳೆಯರ ಅಂಗಾಂಗ ಚಿತ್ರೀಕರಿಸುತ್ತಿದ್ದವಗೆ ಹೈಕೋರ್ಟ್ ಶಾಕ್!

Share
1 Min Read
SHARE

newsics.com/ನ್ಯೂಸಿಕ್ಸ್

ಮೆಟ್ರೋದಲ್ಲಿ ಮಹಿಳೆಯರ ಶರೀರದ ಭಾಗಗಳನ್ನು ಚಿತ್ರೀಕರಿಸಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪಿಯೊಬ್ಬನ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

https://youtube.com/shorts/A7gPa–K6QY?si=UClQxtCV5fiwGWUd

ಸಾರ್ವಜನಿಕ ಸಾರಿಗೆ ಎಂಬುದು ಯಾರಿಗೂ ಭಯವನ್ನು ಉಂಟು ಮಾಡುವ ಮತ್ತು ಶೋಷಣೆಯ ಸ್ಥಳವಾಗಿರಬಾರದು. ಈ ಜಾಗಗಳು ಎಲ್ಲರ ಪಾಲಿಗೆ ಸದಾ ಸುರಕ್ಷತೆ ಹೊಂದಿದ ಘನತೆಯ ತಾಣಗಳಾಗಿ ಕಂಗೊಳಿಸಬೇಕು’ ಎಂದು ಹೇಳಿದೆ.

ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರನ್ನು ಹಿಂಬಾಲಿಸಿ ಅವರ ಶರೀರದ ಭಾಗಗಳನ್ನು ಮೊಬೈಲ್‌ ಫೋನ್‌ನಲ್ಲಿ ಸೆರೆಹಿಡಿದು ಅಂತಹ ವಿಡಿಯೋಗಳನ್ನು ತನ್ನ ‘ಮೆಟ್ರೊ_ಚಿಕ್ಸ್’ ಹೆಸರಿನ ಇನ್‌ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸುತ್ತಿದ್ದ ಆರೋಪಿ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಹಾಗೂ ವಿಚಾರಣೆಯನ್ನು ರದ್ದುಪಡಿಸುವಂತೆ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.

ಪ್ರಕರಣದ ಆರೋಪಿಯು, ದೂರು ಅಥವಾ ದೋಷಾರೋಪ ಪಟ್ಟಿಯಲ್ಲಿ ಕಂಡುಬರುವ ಎಲ್ಲ ಆರೋಪಗಳು ಕಳಪೆ ಮತ್ತು ಅಸ್ಪಷ್ಟವಾಗಿವೆ. ಸಾಕ್ಷಿಗಳು ವಿಶ್ವಾಸಾರ್ಹವಾಗಿಲ್ಲ. ಆದ್ದರಿಂದ, ಪ್ರಕರಣ ರದ್ದುಗೊಳಿಸಬೇಕು ಎಂದು ತನ್ನ ಅರ್ಜಿಯಲ್ಲಿ ಮನವಿ ಮಾಡಿದ್ದರು.

ಕರಿಹೋಬನಹಳ್ಳಿ ತಿಗಳರಪಾಳ್ಯ ಮುಖ್ಯರಸ್ತೆಯ ನಿವಾಸಿ ಬಿ.ಕೆ. ದಿಗಂತ್‌ (28) ತನ್ನ ವಿರುದ್ಧದ ಎಫ್‌ಐಆರ್‌ ಹಾಗೂ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ನ್ಯಾಯಿಕ ವಿಚಾರಣೆ ರದ್ದುಪಡಿಸಬೇಕು ಎಂದು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬನಶಂಕರಿ ಪೊಲೀಸ್‌ ಠಾಣೆ ಪೊಲೀಸರು ಸ್ವಯಂಪ್ರೇರಿತ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ‘ತನ್ನ ಇನ್‌ಸ್ಟಾಗ್ರಾಂ ಖಾತೆ ಮೆಟ್ರೊ_ಚಿಕ್ಸ್‌ ಪುಟವನ್ನು ಹೆಚ್ಚು ಜನರು ಫಾಲೋ ಮಾಡಬೇಕು. ಅತಿ ಹೆಚ್ಚು ಲೈಕ್‌ಗಳು ಹಾಗೂ ಕಮೆಂಟ್‌ಗಳು ಬರಬೇಕು ಎಂಬ ಉದ್ದೇಶದಿಂದ ಆರೋಪಿಯು ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗಿ ಅವರ ಅಂಗಾಂಗಗಳನ್ನು ರಹಸ್ಯವಾಗಿ ಸೆರೆಹಿಡಿದು ವಿಡಿಯೊ ಚಿತ್ರೀಕರಣ ಮಾಡಿದ್ದಾರೆ. ಇಂತಹ 14 ವಿಡಿಯೊಗಳು ಆರೋಪಿಯ ಪುಟದಲ್ಲಿ ಬಿತ್ತರವಾಗಿರುವುದು ಕಂಡುಬಂದಿದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

https://www.newsics.com/2026/04/30/do-you-know-how-many-health-benefits-there-are-from-listening-to-music/

 

TAGGED:High Court shocked by man filming women's private parts in metro!
Share This Article
Facebook Twitter Copy Link Print
Previous Article Benefits of Music ಸಂಗೀತ ಕೇಳೋದ್ರಿಂದ ಹತ್ತಾರು ಆರೋಗ್ಯ ಲಾಭ!
Next Article Gas Cylinder Booking ನಾಳೆಯಿಂದ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?