newsics.com/ನ್ಯೂಸಿಕ್ಸ್
ಕೊಪ್ಪಳ: ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ಶಿಕ್ಷೆ ತೀರ್ಪು ಪ್ರಕಟಿಸಿದರು. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.
ಮೊದಲಿಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.
ಗಂಗಾವತಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದ ಮಾರುತಿ ಎಂಬ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣದಲ್ಲಿ ವೆಂಕಟೇಶ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಲ್ಲದೇ ಮಾರುತಿ ಚಿಕಿತ್ಸೆಗೆ ಕೊನೆಯವರೆಗೂ ಬೆಂಬಲವಾಗಿ ನಿಂತಿದ್ದ ಎಂಬ ಕಾರಣಕ್ಕೆ ವೆಂಕಟೇಶನನ್ನು ಕೊಲೆ ಮಾಡಿದ್ದೀರಿ. ಸಭ್ಯ ನಾಗರಿಕ ಸಮಾಜದ ಇಂತಹ ಕೃತ್ಯಗಳನ್ನು ಒಪ್ಪುವುದಿಲ್ಲ. ಅಪರಾಧ ಕೃತ್ಯಗಳ ಹಿನ್ನೆಲೆ ಪರಿಗಣಿಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
https://www.newsics.com/2026/04/30/milk-soda-is-a-summer-trend/