Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Indigo service suspended ಬೆಂಗಳೂರು- ಶಿವಮೊಗ್ಗ ನಡುವಿನ ಇಂಡಿಗೋ‌ ವಿಮಾನ ಸೇವೆ ಸ್ಥಗಿತ
ಕರ್ನಾಟಕದೇಶಪ್ರಮುಖ

Indigo service suspended ಬೆಂಗಳೂರು- ಶಿವಮೊಗ್ಗ ನಡುವಿನ ಇಂಡಿಗೋ‌ ವಿಮಾನ ಸೇವೆ ಸ್ಥಗಿತ

Share
2 Min Read
SHARE

newsics.com/ನ್ಯೂಸಿಕ್ಸ್

ಶಿವಮೊಗ್ಗ: ಬೆಂಗಳೂರು – ಶಿವಮೊಗ್ಗ ಮಧ್ಯೆ ನಿತ್ಯ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ ಸೇವೆ ಸ್ಥಗಿತಗೊಳಿಸಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಮಾರ್ಗಸೂಚಿ ಅನ್ವಯ ಕಾರ್ಯಾಚರಣೆಗೆ, ಪೈಲಟ್‌ಗಳ ಕೊರತೆ ಕಾರಣಕ್ಕೆ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸಂಚಾರ ಮೇ 1 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.‌

ಇಂಡಿಗೊ ಸಂಸ್ಥೆ ನಿತ್ಯ ಶಿವಮೊಗ್ಗ-ಬೆಂಗಳೂರು ಮಧ್ಯೆ ವಿಮಾನ ಹಾರಾಟ ನಡೆಸುತ್ತಿತ್ತು. ಮೂರು ತಿಂಗಳ ಅವಧಿಗೆ (ಅಕ್ಟೋಬರ್) ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಸಂಸ್ಥೆ ತಿಳಿಸಿದೆ.

ಶಿವಮೊಗ್ಗ-ಬೆಂಗಳೂರು ನಡುವೆ ಹೆಚ್ಚಿನ ಜನದಟ್ಟಣೆ ಇರುವುದರಿಂದ ವಿಮಾನ ಹಾರಾಟ ನಿಲ್ಲಿಸದಂತೆ ಇಂಡಿಗೊ ಸಂಸ್ಥೆಗೆ ಸರ್ಕಾರ ಮನವಿ ಮಾಡಿತ್ತು. ಆದರೆ ಅದಕ್ಕೆ ಸಂಸ್ಥೆ ಒಪ್ಪಿಲ್ಲ. ಡಿಜಿಸಿಎ ಮಾರ್ಗಸೂಚಿ ಪಾಲನೆಗಾಗಿ ಬೆಂಗಳೂರು?ಶಿವಮೊಗ್ಗ ಮಾತ್ರವಲ್ಲ ಕಡಿಮೆ ದೂರದ ಮಾರ್ಗಗಳಲ್ಲಿ ಬಹಳಷ್ಟು ಕಡೆ ಶುಕ್ರವಾರದಿಂದ ಸಂಸ್ಥೆ ವಿಮಾನ ಹಾರಾಟ ನಿಲ್ಲಿಸುತ್ತಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ 2025ರ ಜೂನ್ 12 ರಂದು ಏರ್‌ಇಂಡಿಯಾ ವಿಮಾನ (ಎಐ171) ಪತನದ ನಂತರ ವಿಮಾನಗಳ ಸುರಕ್ಷಿತ ಕಾರ್ಯಾಚರಣೆಗೆ ಡಿಜಿಸಿಎ ಕೆಲವು ನಿಯಮಾವಳಿ ರೂಪಿಸಿದೆ.

ಅವುಗಳ ಅಳವಡಿಕೆಗೆ ಒಂದು ವರ್ಷದ ಕಾಲಾವಕಾಶ ವಿಮಾನಯಾನ ಸಂಸ್ಥೆಗಳಿಗೆ ನೀಡಲಾಗಿದೆ. ಆ ನಿಯಮಾವಳಿ ಪಾಲನೆಯಿಂದ ಇಂಡಿಗೊ ಸಂಸ್ಥೆಗೆ ಪೈಲಟ್‌ಗಳ ಕೊರತೆ ಆಗಿದೆ. ಮಧ್ಯಪ್ರಾಚ್ಯ ಯುದ್ದದ ಹಿನ್ನೆಲೆ ಇಂಧನ ದರ ಏರಿಕೆಯಾಗಿದೆ. ವೈಮಾನಿಕ ಇಂಧನದ ಬೆಲೆ ಗಗನಕ್ಕೇರಿದೆ. ಭಾರತದ ಜನಪ್ರಿಯ ವಿಮಾನಯಾನ ಸಂಸ್ಥೆ ಇಂಡಿಗೋ ಏರ್‌ಲೈನ್ಸ್‌ಗೆ ಇದರಿಂದ ಭಾರಿ ಪೆಟ್ಟು ಬಿದ್ದಿದೆ.

ವಿಜಿಎ- ಒಪ್ಪಂದ ಮುಕ್ತಾಯ

ಬೆಂಗಳೂರು- ಶಿವಮೊಗ್ಗ ಮಾರ್ಗವು ಉಡಾನ್ ಯೋಜನೆ ವ್ಯಾಪ್ತಿಗೆ ಒಳಪಡುವುದಿಲ್ಲ. ಹಾಗಾಗಿ ರಾಜ್ಯ ಸರ್ಕಾರವೆ ವಯೋಬಲಿಟಿ ಗ್ಯಾಪ್ ಫಂಡಿಂಗ್ ಒಪ್ಪಂದದ ಮೂಲಕ ನೆರವು ನೀಡುತ್ತಿತ್ತು. ಪ್ರತಿ ಟಿಕೆಟ್‌ಗೆ 500 ರು. ಸಹಾಯಧನವನ್ನು ರಾಜ್ಯ ಸರ್ಕಾರ ಒದಗಿಸುತ್ತಿತ್ತು. ಈ ಒಪ್ಪಂದವು 2025ರ ಆಗಸ್ಟ್‌ನಲ್ಲಿ ಮುಕ್ತಾಯಗೊಂಡಿತ್ತು. ಇದರಿಂದ ಇಂಡಿಗೋ ಸಂಸ್ಥೆಗೆ ನಷ್ಟವಾಗಿತ್ತು. ಆದರು 2026ರ ಏಪ್ರಿಲ್ 30ರವರೆಗೆ ಸೇವೆ ಮುಂದುವರೆದಿತ್ತು. ಬೆಂಗಳೂರು – ಶಿವಮೊಗ್ಗ – ಬೆಂಗಳೂರು ಮಾರ್ಗದ ರದ್ದತಿ ತಾತ್ಕಾಲಿಕ.ಆದರೆ ಸಮಸ್ಯೆಗಳೆಲ್ಲ ಪರಿಹಾರವಾಗಿ ಸೇವೆ ಪುನಾರಂಭ ಆಗುವುದಕ್ಕೆ ಯಾವುದೇ ಕಾಲಮಿತಿ ಘೋಷಣೆ ಆಗಿಲ್ಲ.

ಇದರ ಬೆನ್ನಿಗೆ ಇತರೆ ವಿಮಾನಯಾನ ಸಂಸ್ಥೆಗಳ ಜೊತೆಗೆ ಚರ್ಚೆ ಆರಂಭವಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸದ್ಯ ಸ್ಟಾರ್ ಏರ್ ಸಂಸ್ಥೆ ಹೈದರಾಬಾದ್, ಗೋವಾ ಹಾಗೂ ತಿರುಪತಿಗೆ, ಸ್ಪೈಸ್ ಜೆಟ್ ಸಂಸ್ಥೆ ಶಿವಮೊಗ್ಗದಿಂದ ಹೈದರಾಬಾದ್ ಹಾಗೂ ಚೆನ್ನೈಗೆ ನಿತ್ಯ ವಿಮಾನ ಓಡಾಟ ನಡೆಸುತ್ತಿವೆ.ಇನ್ನಷ್ಟು ಪ್ರಮುಖ ಸ್ಥಳಗಳಿಗೆ ವಿಮಾನಯಾನ ಆರಂಭವಾಗುವ ನಿರೀಕ್ಷೆ ಇತ್ತು. ಆದರೆ ಈಗ ಜನಪ್ರಿಯ ಮಾರ್ಗವಾಗಿದ್ದ ಬೆಂಗಳೂರಿಗೆ ವಿಮಾನಯಾನ ಸೇವೆ ಸ್ಥಗಿತವಾಗಿರುವುದು ಚರ್ಚೆಗೆ ಕಾರಣವಾಗಿದೆ.

Gang ra*pe ಇಬ್ಬರು ಬಾಲಕಿಯರ ಮೇಲೆ 12‌ ಕಾಮುಕರಿಂದ ಸಾಮೂಹಿಕ ಅತ್ಯಾ*ಚಾರ, 6 ಮಂದಿ‌ ಬಂಧನ

TAGGED:IndiGo flight service between Bengaluru and Shivamogga suspended
Share This Article
Facebook Twitter Copy Link Print
Previous Article Gang ra*pe ಇಬ್ಬರು ಬಾಲಕಿಯರ ಮೇಲೆ 12‌ ಕಾಮುಕರಿಂದ ಸಾಮೂಹಿಕ ಅತ್ಯಾ*ಚಾರ, 6 ಮಂದಿ‌ ಬಂಧನ
Next Article Mamata moves supreme court ಪಶ್ಚಿಮ‌ ಬಂಗಾಳ ಚುನಾವಣೆ: ಸುಪ್ರೀಂ ಕೋರ್ಟ್ ಮೊರೆಹೋದ ಮಮತಾ, ಇಂದೇ (ಶನಿವಾರವೇ) ವಿಚಾರಣೆ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?