newsics.com/ನ್ಯೂಸಿಕ್ಸ್
ನಾಲ್ಕು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
https://youtube.com/shorts/xzgXqaAsbcA?si=TkhVxPE1WLxdWyg8
ಈ ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಆ ಪ್ರದೇಶದಲ್ಲಿ ಕೆಲಕಾಲ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಕ್ರೋಶಿತ ನಿವಾಸಿಗಳನ್ನು ಸಮಾಧಾನಪಡಿಸಿದ್ದಾರೆ.
ಆರೋಪಿಯು ಅಮಾಯಕ ಮಗುವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ, ನಂತರ ಆಕೆಯ ಶವವನ್ನು ಕೊಟ್ಟಿಗೆಯೊಂದರಲ್ಲಿ ಬಚ್ಚಿಟ್ಟಿದ್ದ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯ ಹೆಸರನ್ನು ಸದ್ಯಕ್ಕೆ ಬಹಿರಂಗಪಡಿಸಲಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಎನ್‌ಸಿಪಿ (ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಈ ಭೀಕರ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೆ, ಈ ಆರೋಪಿ ಈ ಹಿಂದೆ ಕೂಡ ಇಬ್ಬರು-ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಇಂತಹದ್ದೇ ಕೃತ್ಯ ಎಸಗಿದ್ದ ಎಂಬ ಮಾಹಿತಿ ಇದೆ ಎಂದು ಶಾಸಕರು ತಿಳಿಸಿದ್ದಾರೆ.
https://www.newsics.com/2026/05/02/housewife-commits-suicide-after-three-years-of-marriage/