newsics.com/ನ್ಯೂಸಿಕ್ಸ್
ನವದೆಹಲಿ: ಅಮೆರಿಕ-ಇರಾನ್ ನಡುವೆ ಸಂಧಾನ ಯತ್ನ ಅಮೆರಿಕ-ಇರಾನ್ ನಡುವೆ ಸಂಧಾನ ಯತ್ನ ವಿಫಲವಾಗಿದ್ದರಿಂದ ಹತಾಶನಾಗಿರುವ ಪಾಕಿಸ್ತಾನದ ಸಶಸ್ತ್ರ ಪಡೆಗಳ ಮುಖ್ಯಸ್ಥ ಆಸೀಂ ಮುನೀರ್, ತನ್ನ ಇಮೇಜ್ ಹೆಚ್ಚಿಸಿಕೊಳ್ಳುವ ಯೋಜನೆಯ ಭಾಗವಾಗಿ ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಸಂಚು ರೂಪಿಸಿದ್ದಾನೆ.
https://youtube.com/shorts/xzgXqaAsbcA?si=TkhVxPE1WLxdWyg8
ಪಾಕ್‌ನ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿರುವ ಈತ ಉಗ್ರಜಾಲಕ್ಕೆ ಮತ್ತೆ ಉತ್ತೇಜನ ನೀಡಲು ಉದ್ದೇಶಿಸಿದ್ದಾನೆ ಎಂದು ಭದ್ರತಾ ಪಡೆಗಳು ಎಚ್ಚರಿಕೆ ನೀಡಿವೆ.
ಆಸೀಂ ಮುನೀರ್‌ಗೆ ಇದು ವೈಯಕ್ತಿಕ ಮತ್ತು ರಾಜಕೀಯ ಪ್ರತಿಷ್ಠೆಯ ವಿಷಯವಾಗಿದೆ. ಇತ್ತೀಚೆಗೆ ಅವರು ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕಾಗಿ ಶ್ರಮಿಸಿದ್ದರು, ಆದರೆ ಅದು ವಿಫಲವಾಗಿದೆ. ಇದರಿಂದ ಅವರ ‘ಜಾಗತಿಕ ರಾಜನೀತಿಜ್ಞ’ ಇಮೇಜ್‌ಗೆ ಧಕ್ಕೆ ಬಂದಿದೆ. ಈ ನಡುವೆ ಅವರು ಅಧ್ಯಕ್ಷ ಸ್ಥಾನಕ್ಕೆ ಕಣ್ಣು ಹಾಕಿದ್ದಾರೆ. ಹಾಗಾಗಿ ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಯಗೊಳಿಸುವ ಮೂಲಕ ತಮ್ಮ ಇಮೇಜ್ ಅನ್ನು ಭದ್ರಪಡಿಸಿಕೊಳ್ಳಲು ಮತ್ತು ಅಧ್ಯಕ್ಷ ಪಟ್ಟವೇರಲು ಹಾದಿ ಸುಗಮಗೊಳಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.