newsics.com/ನ್ಯೂಸಿಕ್ಸ್
ಒಂಟಿ ಮಹಿಳೆಯರನ್ನು ಸೋಶಿಯಲ್ ಮೀಡಿಯಾದಲ್ಲಿ ಟಾರ್ಗೆಟ್ ಮಾಡುವ ಮೂಲಕ ಅವರಿಗೆ ಎಸ್ಪಿ, ನಟ, ವಕೀಲ ಎಂದೆಲ್ಲಾ ಬಿಲ್ಡಪ್ ಕೊಟ್ಟು ಅವರಿಗೆ ಸಹಾಯ ಮಾಡುವ ಆಮಿಷವೊಡ್ಡಿ ನಂಬಿಸಿ ಅವರೊಂದಿಗಿನ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡುವ ಮೂಲಕ ಅವರನ್ನು ಬ್ಲ್ಯಾಕ್ ಮೇಲೆ ಮಾಡಿ ಲಕ್ಷ ಲಕ್ಷ ಹಣ ದೋಚಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಡಾ.ಹನಿಯೂರು ಚಂದ್ರೇಗೌಡನನ್ನು RR ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಚಂದ್ರೇಗೌಡ ಒಂದೊಂದು ಮಹಿಳೆಗೆ ಒಂದೊಂದು ರೀತಿ ತನ್ನನ್ನು ಪರಿಚಯಿಸಿಕೊಳ್ಳುತ್ತಿದ್ದ. ಕೆಲವರಿಗೆ ತಾನು ಸೀರಿಯಲ್ ನಟ ಎಂದರೆ, ಇನ್ನು ಕೆಲವರಿಗೆ ಪ್ರೊಫೆಸರ್ ಎಂದು ಸುಳ್ಳು ಹೇಳಿ ನಂಬಿಸುತ್ತಿದ್ದ. 43 ವರ್ಷದ ಮಹಿಳೆಯೊಬ್ಬರ ಜೊತೆ ಸಂಬಂಧದಲ್ಲಿದ್ದ ಈತ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಈ ಮಹಿಳೆ ತನ್ನ ಪತಿಯಿಂದ ದೂರವಾಗಿದ್ದನ್ನು ಬಂಡವಾಳ ಮಾಡಿಕೊಂಡಿದ್ದ ಈತ, ಆಕೆಯ ಮೇಲೆ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.
ಪೊಲೀಸರು ಹನಿಯೂರು ಚಂದ್ರೇಗೌಡನ ಮೊಬೈಲ್ ಪರಿಶೀಲನೆ ಮಾಡಿದಾಗ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ, ಫೋಟೋ ಪತ್ತೆಯಾಗಿವೆ. ಗಂಡನಿಂದ ದೂರವಾಗಿದ್ದ ಮಹಿಳೆ ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಗೆ ನಾನು ಲೆಕ್ಚರ್ ಎಂದು ಪರಿಚಯ ಮಾಡಿಕೊಂಡಿದ್ದ. ನನಗೆ ಡಿವೋರ್ಸ್ ಆಗಿದ್ದು, ನಿನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿ ಆಕೆಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ. ಖಾಸಗಿ ಕ್ಷಣವನ್ನು ವಿಡಿಯೋ ಮಾಡಿಕೊಂಡಿದ್ದ ಚಂದ್ರೇಗೌಡ ಅದನ್ನು ಇಟ್ಟುಕೊಂಡು ಮಹಿಳೆಗೆ ಹೆದರಿಸಿ ಆಕೆಯಿಂದ 5 ಲಕ್ಷ ಹಣ ಪಡೆದಿದ್ದ ಎಂದು ದೂರಲಾಗಿದೆ
ಸದ್ಯ ಆರೋಪಿಯನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದು, ಈತನಿಂದ ಇನ್ನೂ ಎಷ್ಟು ಮಹಿಳೆಯರು ವಂಚನೆಗೊಳಗಾಗಿದ್ದಾರೆ ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.