newsics.com
ಬೆಂಗಳೂರು: ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸೋಮವಾರ ಸೂಚನೆ ನೀಡಿದೆ.
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ.
ಸಿಎಂ ಪರ ವಕೀಲರು ಇಂದು (ಆಗಸ್ಟ್ 19) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಆಗಸ್ಟ್ 29ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.
ಅಲ್ಲದೇ ಜನಪ್ರತಿನಿಧಿಗಳ ಕೋರ್ಟ್ನ ಆದೇಶವನ್ನು ಆ.29ಕ್ಕೆ ಮುಂದೂಡುವಂತೆ ಸೂಚಿಸಿದೆ. ಈ ಮೂಲಕ ಸಿದ್ದರಾಮಯ್ಯ ನಾಳಿನ ಬೀಸುವ ದೊಣ್ಣೆಯಿಂದ ಪಾರಾದಂತಾಗಿದೆ.
ಸ್ನೇಹಮಯಿ ಕೃಷ್ಣ ಹಾಗೂ ಟಿಜೆ ಅಬ್ರಹಾಂ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ್ದರು ಈ. ಎರಡು ದೂರುಗಳ ವಿಚಾರಣೆ ನಡೆಸಬೇಕೋ ಬೇಡ್ವಾ ಎನ್ನುವ ಆದೇಶವನ್ನು ನಾಳೆ(ಆಗಸ್ಟ್ 20) ಕಾಯ್ದಿರಿಸಿತ್ತು. ಆದ್ರೆ, ಇದೀಗ ಹೈಕೋರ್ಟ್ ಈ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ಗೆ ಸೂಚಿಸಿದೆ.