newsics.com/ನ್ಯೂಸಿಕ್ಸ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳಗ್ಗೆಯೇ ಮಳೆಯಾಗಿದೆ. ನಗರದ ವಿವಿಧೆಡೆ ಜೋರು ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಜೊತೆಗೆ ಮೂರು ಗಂಟೆಗಳಲ್ಲೇ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
https://youtube.com/shorts/1MGAmJmhYq0?si=nMc-nPA4I0KAHwKo
ಮೇ 9ರ ವರೆಗೆ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಭಾಗಕ್ಕೆ ಹವಾಮಾನ ಇಲಾಖೆ ಹಗುರದಿಂದ ಸಾಧಾರಣ ಮಳೆಯವರೆಗೂ ಎಚ್ಚರಿಕೆ ನೀಡಿದೆ.
ಮುಂದಿನ ಮೂರು ಗಂಟೆಗಳ ಕಾಲರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ನಾಲ್ಕು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿಯೊಂದಿಗೆ ಮಳೆಯಾಗಲಿದ್ದು, ಜನರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.