newsics.com/ನ್ಯೂಸಿಕ್ಸ್
ಚಿಕ್ಕಮಗಳೂರು: ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಓರ್ವನನ್ನು ರಕ್ಷಿಸಿರುವ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ದುರಂತ ನಡೆದಿದೆ. 9 ವರ್ಷದ ಅಬ್ದುಲ್ ರೆಹಮಾನ್, ನಯಾಜ್(12), ಮದೀನಾ ಬಾನು(8), ಆರುನ್(10) ಮೃತಪಟ್ಟವರು ಎಂದು ಹೇಳಲಾಗಿದೆ.
ಆರ್ಮಾನ್ ಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.