newsics.com
ಬೆಂಗಳೂರು: ಬೆಂಗಳೂರು ನಗರದಲ್ಲಿ ಭಾರೀ ಮಳೆಗೆ ರಸ್ತೆಗಳೆಲ್ಲಾ ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.
ಹಲವೆಡೆ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಹೆಬ್ಬಾಳ ಫ್ಲೈ ಓವರ್ ಬಳಿಯಂತೂ ಸಂಪೂರ್ಣ ಜಲಾವೃತವಾದ ದೃಶ್ಯ ಕಂಡು ಬಂದಿದೆ.
ಯಶವಂತಪುರ, ಹೆಬ್ಬಾಳ ಅಂಡರ್ ಪಾಸ್‌ನಲ್ಲಿ ಮಳೆ ಕಡಿಮೆಯಾದ್ರೂ ವಾಹನ ಸವಾರರು ಕಿಲೋ ಮೀಟರ್ ಗಟ್ಟಲೆ ಕ್ಯೂ ನಿಂತಿದ್ದ ದೃಶ್ಯ ಕಂಡು ಬಂತು. ಚರಂಡಿ ನೀರೆಲ್ಲಾ ಕಾಲೋನಿಗಳಿಗೆ ನುಗ್ದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.