newsics.com/ನ್ಯೂಸಿಕ್ಸ್
ಬೆಂಗಳೂರು: ಮಹಿಳೆಯರ ಸುರಕ್ಷತೆ ಮತ್ತು ಹಕ್ಕುಗಳನ್ನು ರಕ್ಷಿಸುವ ದೃಷ್ಟಿಯಿಂದ, ಸೂರ್ಯಾಸ್ತದ ನಂತರ ಮತ್ತು ಸೂರ್ಯೋದಯಕ್ಕೆ ಮೊದಲು ಯಾವುದೇ ವಿಚಾರಣೆ ಅಥವಾ ತನಿಖೆಗಾಗಿ ಮಹಿಳೆಯರನ್ನು ಪೊಲೀಸ್ ಠಾಣೆಗೆ ಕರೆತರಬಾರದು ಎಂದು ರಾಜ್ಯದ ಎಲ್ಲಾ ಪೊಲೀಸ್ ಘಟಕಗಳಿಗೆ ಡಿಜಿ ಮತ್ತು ಐಜಿಪಿ (ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್) ಕಚೇರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
https://youtube.com/shorts/iatQVbaFb3g?si=I11csgvje-MFvvAP
ರೈಲ್ವೆ ಮತ್ತು ಕೆಜಿಎಫ್ ಸೇರಿದಂತೆ ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ರೇಂಜ್ ಇನ್ಸ್ಪೆಕ್ಟರ್ ಜನರಲ್ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಅನಿವಾರ್ಯ ಅಥವಾ ತುರ್ತು ಸಂದರ್ಭಗಳಲ್ಲಿ ರಾತ್ರಿ ವೇಳೆ ವಿಚಾರಣೆ ನಡೆಸಲೇಬೇಕಾದ ಅನಿವಾರ್ಯತೆ ಇದ್ದರೆ, ಮಹಿಳಾ ಪೊಲೀಸ್ ಅಧಿಕಾರಿಯ ಉಪಸ್ಥಿತಿ ಕಡ್ಡಾಯ ಎಂದು ಸ್ಪಷ್ಟಪಡಿಸಲಾಗಿದೆ.
ಜುಲೈ 2024ರಲ್ಲಿ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ನೆರೆಹೊರೆಯವರೊಂದಿಗಿನ ವಿವಾದದ ಸಂದರ್ಭದಲ್ಲಿ ಮಹಿಳೆಯೊಬ್ಬರನ್ನು ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಠಾಣೆಯಲ್ಲಿ ಇರಿಸಲಾಗಿತ್ತು. ಈ ಬಗ್ಗೆ ಸಂತ್ರಸ್ತೆ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು.
ಮಹಿಳೆಯರನ್ನು ರಾತ್ರಿ ವೇಳೆ ಠಾಣೆಗೆ ಕರೆತರುವುದು ಅವರ ಸುರಕ್ಷತೆ ಮತ್ತು ಹಕ್ಕುಗಳ ಬಗ್ಗೆ ಗಂಭೀರ ಚಿಂತೆ ಹುಟ್ಟಿಸುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗ ಹೇಳಿದೆ.
https://www.newsics.com/2026/05/05/auto-driver-wins-raipuram-seat-defeating-two-experienced-leaders/