newsics.com/ನ್ಯೂಸಿಕ್ಸ್
ಬೆಂಗಳೂರು : ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಡಿ ಎನ್ ಜೀವರಾಜ್ ಸಲ್ಲಿಸಿರುವ ಅರ್ಜಿ ಇಂದು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಹೈಕೋರ್ಟ್ ಮೇ 7ರವರೆಗೆಬಿಜೆಪಿಯ ಡಿಎನ್ ದೇವರಾಜ್ ಅವರ ವಿರುದ್ಧ ದಾಖಲಾದ ಎಫ್ಐಆರ್ ಗೆ ತಡೆ ನೀಡಿದೆ.
https://youtube.com/shorts/iatQVbaFb3g?si=I11csgvje-MFvvAP
170 ಮತಗಳನ್ನು ತಿದ್ದುಪಡಿಯಾಗಿದೆ ಎಂದು ಸುಧೀರ್ ಕುಮಾರ್ ಮುರಳಿ ದೂರು ನೀಡಿದ್ದರು. ದೂರು ಆಧರಿಸಿ ನಗರ ಠಾಣೆ ಪೊಲೀಸರು ದಾಖಲಿಸಿದ್ದರು. ಗೊಂದಲಗಳಿದ್ದರೆ ಚುನಾವಣಾ ತಕರಾರು ಅರ್ಜಿಯಲ್ಲೇ ಉಲ್ಲೇಖಿಸಬೇಕಿತ್ತು. ಸಂಬಂಧಪಟ್ಟ ನ್ಯಾಯಮೂರ್ತಿಗಳು ಸೂಕ್ತ ಆದೇಶ ನೀಡುತ್ತಿದ್ದರು. ರಾಜಕೀಯ ಒತ್ತಡದಿಂದ ದೂರು ದಾಖಲಿಸುವುದು ಸರಿಯಲ್ಲ ಹೀಗಾದರೆ ಯಾವ ಅಧಿಕಾರಿಯು ಸ್ವತಂತ್ರವಾಗಿ ಕೆಲಸ ಮಾಡಲಾಗುವುದಿಲ್ಲ ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು.
ಕಳೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜೀವರಾಜ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಸದ್ಯಕ್ಕೆ ಕ್ರಮ ಕೈಗೊಳ್ಳದಂತೆ ಸೂಚಿಸಿ, ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದೆ. ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮ ಆರೋಪದ ಈ ಪ್ರಕರಣವು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.
https://www.newsics.com/2026/05/05/mk-stalin-resigns-as-tamil-nadu-cm/