newsics.com/ನ್ಯೂಸಿಕ್ಸ್
ಜಾರ್ಖಂಡ್ನ ಆಸ್ಪತ್ರೆಯೊಂದರಲ್ಲಿ ಮೊಬೈಲ್ ಟಾರ್ಚ್ ಹಾಕಿಕೊಂಡು ಮಹಿಳೆಗೆ ಹೆರಿಗೆ ಮಾಡಿಸಲಾಗಿದೆ. ಇದರಿಂದ ಆ ಮಹಿಳೆ ಮತ್ತು ನವಜಾತ ಶಿಶು ಸಾವನ್ನಪ್ಪಿರುವ ಅಮಾನವೀಯ ಘಟನೆ ನಡೆದಿದೆ. ಮೃತರನ್ನು ಹತಿಸಿರಿಂಗ್ ಗ್ರಾಮದ ನಿವಾಸಿ ಬಿನಿತಾ ಬನ್ರಾ ಎಂದು ಗುರುತಿಸಲಾಗಿದೆ.
https://youtube.com/shorts/iatQVbaFb3g?si=I11csgvje-MFvvAP
ರಾಜನಗರ ಸಿಎಚ್‌ಸಿಯಲ್ಲಿ ಹೆರಿಗೆಯ ಸಮಯದಲ್ಲಿ ವಿದ್ಯುತ್ ಕಡಿತವಾಗಿದ್ದರಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಆ ಆಸ್ಪತ್ರೆಯಲ್ಲಿ ವಿದ್ಯುತ್ ಬ್ಯಾಕಪ್ ಇರಲಿಲ್ಲ. ಬಳಿಕ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿ ಮೊಬೈಲ್ ಟಾರ್ಚ್‌ಲೈಟ್ ಬಳಸಿ ಹೆರಿಗೆ ಮಾಡಿದ್ದಾರೆ. ಈ ಪ್ರಕ್ರಿಯೆಯ ಸಮಯದಲ್ಲಿ ಮಹಿಳೆಯ ಸ್ಥಿತಿ ಹದಗೆಟ್ಟಿತು. ಆಕೆಗೆ ಸರಿಯಾದ ಚಿಕಿತ್ಸೆ ನೀಡಲಾಗಲಿಲ್ಲ. ಆಕೆಗೆ ಸಕಾಲದಲ್ಲಿ ಉನ್ನತ ವೈದ್ಯಕೀಯ ಸೌಲಭ್ಯ ಕೂಡ ಸಿಗಲಿಲ್ಲ.
ಇದರಿಂದಾಗಿ ತಾಯಿ ಮತ್ತು ನವಜಾತ ಶಿಶು ಇಬ್ಬರೂ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.