newsics.com/ನ್ಯೂಸಿಕ್ಸ್
ಮುರ್ಷಿದಾಬಾದ್: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಸಾಲಾರ್ ಪ್ರದೇಶದಲ್ಲಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಫೋಟದ ತೀವ್ರತೆಗೆ ಆತನ ಎರಡು ಕೈಗಳು ಛಿದ್ರವಾಗಿವೆ.
https://youtube.com/shorts/gjYZnQ_VPsc?si=qVOf4mHBsp6RN8ZV
ಗಂಭೀರವಾಗಿ ಗಾಯಗೊಂಡಿರುವ 18 ವರ್ಷದ ಯುವಕನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆತ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಸ್ಫೋಟದ ಭೀಕರತೆಗೆ ಯುವಕನ ಎರಡು ಕೈಗಳು ಸಂಪೂರ್ಣವಾಗಿ ತುಂಡಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮತದಾನ ಮುಕ್ತಾಯವಾದ ನಂತರವೂ ರಾಜಕೀಯ ಸಂಘರ್ಷಗಳು ಮುಂದುವರಿಯುತ್ತಿವೆ. ಈ ಬಾಂಬ್ ಸ್ಫೋಟವು ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದೆಯೇ ಅಥವಾ ಬಾಂಬ್ ತಯಾರಿಸುವಾಗ ಅಚಾನಕ್ ಆಗಿ ಸಂಭವಿಸಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸ್ಫೋಟದ ಸುದ್ದಿ ಹರಡುತ್ತಿದ್ದಂತೆ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಹೆಚ್ಚಿನ ಬಾಂಬ್ಗಳು ಅಡಗಿಸಿಡಲಾಗಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ.
https://www.newsics.com/2026/05/08/new-twist-in-watermelon-death-case/