Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿಯು ಕೆಲಸವಿಲ್ಲ ಎಂಬ ನೆಪ ಹೇಳಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು
ಕರ್ನಾಟಕಪ್ರಮುಖ

ಪತಿಯು ಕೆಲಸವಿಲ್ಲ ಎಂಬ ನೆಪ ಹೇಳಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಅರ್ಜಿದಾರ ಪತಿ ಮತ್ತು ಪತ್ನಿ ಇಬ್ಬರೂ ಈ ಮೊದಲೇ ವಿಚ್ಛೇದನ ಪಡೆದವರಾಗಿದ್ದು, 2021ರಲ್ಲಿ ಮರು ವಿವಾಹವಾಗಿದ್ದರು. ಆದರೆ, ದಾಂಪತ್ಯದಲ್ಲಿ ಮೂಡಿದ ಭಿನ್ನಾಭಿಪ್ರಾಯದಿಂದಾಗಿ 2022ರಲ್ಲಿ ಪತ್ನಿಯು ಜೀವನಾಂಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಮಾಸಿಕ 20 ಸಾವಿರ ರೂಪಾಯಿ ಮಧ್ಯಂತರ ಜೀವನಾಂಶ ನೀಡುವಂತೆ ಪತಿಗೆ ನಿರ್ದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪತಿಯು ಹೈಕೋರ್ಟ್ ಮೆಟ್ಟಿಲೇರಿದ್ದರು.

ತಾವು 2023ರಲ್ಲಿ ಕೆಲಸ ಕಳೆದುಕೊಂಡಿದ್ದು, ಪ್ರಸ್ತುತ ನಿರುದ್ಯೋಗಿಯಾಗಿದ್ದೇನೆ ಎಂದು ಪತಿ ವಾದಿಸಿದ್ದರು. ತಂದೆ-ತಾಯಿಯ ಪಿಂಚಣಿ ಹಾಗೂ ಹಳೆಯ ಉಳಿತಾಯದ ಹಣದಲ್ಲಿ ಜೀವನ ಸಾಗಿಸುತ್ತಿರುವುದಾಗಿ ಹೇಳಿಕೊಂಡಿದ್ದರು. ಅಲ್ಲದೆ, ಪತ್ನಿಯು ಪದವೀಧರೆಯಾಗಿದ್ದು, ಸ್ವಂತ ಆದಾಯ ಹೊಂದಿರುವುದರಿಂದ ಆಕೆಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದ್ದರು.

ಆರೋಗ್ಯವಂತ ಪತಿಯು ಕೆಲಸವಿಲ್ಲ ಎಂಬ ನೆಪ ಹೇಳಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಹೈಕೋರ್ಟ್ ಪುನರುಚ್ಚರಿಸಿದೆ.

ವೈವಾಹಿಕ ಜೀವನದ ಅವಧಿಯಲ್ಲಿ ಪತ್ನಿ ಯಾವ ರೀತಿಯ ಜೀವನಮಟ್ಟವನ್ನು ಅನುಭವಿಸಿದ್ದರೋ, ಅದನ್ನು ಮುಂದುವರಿಸಲು ಜೀವನಾಂಶದ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

https://www.newsics.com/2026/05/08/the-heat-of-war-has-hit-the-stock-market-sensex-falls-500-points/

 

TAGGED:A husband cannot shirk his responsibilities by claiming he is unemployed: High Court's landmark verdict
Share This Article
Facebook Twitter Copy Link Print
Previous Article ಷೇರು ಮಾರುಕಟ್ಟೆಗೆ ತಟ್ಟಿದ ಯುದ್ಧದ ಬಿಸಿ : ಸೆನ್ಸೆಕ್ಸ್ 500 ಅಂಕಗಳ ಕುಸಿತ,
Next Article ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : 13 ವರ್ಷದ ದಾಖಲೆ ಉಡೀಸ್‌!

Popular Posts

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read

You Might Also Like

ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಪ್ರಮುಖ

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?