Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ನೋಡಿ ಬೆಚ್ಚಿ ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ!
ಪ್ರಮುಖ

ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ನೋಡಿ ಬೆಚ್ಚಿ ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ!

Share
2 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಅದರ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡಿದೆ. ವಿಶೇಷವಾಗಿ ಮತದಾರರ ಪಟ್ಟಿ ಪರಿಷ್ಕರಣೆಯೊಂದಿಗಿನ ಎಸ್‌ಐಆರ್ ಪ್ರಕ್ರಿಯೆ ಕುರಿತು ಆತಂಕ ವ್ಯಕ್ತವಾಗಿದೆ.

ಈ ವಿಷಯದ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ.

ರಾಜ್ಯದಲ್ಲಿ ನಡೆಯಲಿರುವ ಎಸ್‌ಐಆರ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಹಾಗೂ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪ್ರಮುಖ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಹಲವು ಸಂಘಟನೆಗಳ ಮುಖಂಡರು ಭಾಗವಹಿಸಿ, ಈ ಪ್ರಕ್ರಿಯೆಯಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ತಮ್ಮ ಆತಂಕಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ಉಂಟಾಗಬಹುದಾದ ತೊಂದರೆಗಳು, ಕೆಲವು ಸಮುದಾಯಗಳಿಗೆ ಆಗಬಹುದಾದ ಅನ್ಯಾಯ, ಹಾಗೂ ಪ್ರಕ್ರಿಯೆಯ ಪಾರದರ್ಶಕತೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನಗಳನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕೆಂಬ ವಿಚಾರವನ್ನೂ ಪರಿಗಣಿಸಲಾಗುತ್ತಿದೆ.

ಎಸ್‌ಐಆರ್ ವಿರೋಧಿಸುತ್ತಿರುವ ಸಂಘಟನೆಗಳೆಂದರೆ ಎದ್ದೇಳು ಕರ್ನಾಟಕ ಸಂಘಟನೆ, ಡಿಎಸ್‌ಎಸ್, ಎಂಎಂಎಂ, ಕ್ರಿಶ್ಚಿಯನ್ ಸಮುದಾಯದ ನಾಯಕರು, ರಾಜ್ಯ ರೈತ ಸಂಘ, ಆಪ್, ಸಿಪಿಎಂ, ಕರ್ನಾಟಕ ಜನಶಕ್ತಿ, ಸಿಪಿಎಂ, WPI,SDPI ಸೇರಿದಂತೆ ಸಣ್ಣಪುಟ್ಟ ಸಂಘಟನೆಗಳ ನಾಯಕರು.

ಎಸ್‌ಐಆರ್ ಪ್ರಕ್ರಿಯೆ ಸೂಕ್ಷ್ಮವಾಗಿ ಗಮನಿಸಲು ನಿರ್ಧಾರ

ಎಸ್‌ಐಆರ್ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಗಮನಿಸಲು ಸರ್ಕಾರ ನಿರ್ಧರಿಸಿದ್ದು, ಯಾವುದೇ ಆಕ್ಷೇಪಾರ್ಹ ಅಥವಾ ಅನ್ಯಾಯಕರ ನಡೆ ಕಂಡುಬಂದರೆ ಅದನ್ನು ತೀವ್ರವಾಗಿ ವಿರೋಧಿಸುವ ಬಗ್ಗೆ ನಿರ್ಧಾರ ಮಾಡಿದೆ. ಇದೇ ವೇಳೆ, ಇಂತಹ ಸಂದರ್ಭಗಳನ್ನು ಎದುರಿಸಲು ಕಾನೂನುಬದ್ಧ ಹಾಗೂ ರಾಜಕೀಯ ಮಾರ್ಗಗಳನ್ನು ಅನ್ವೇಷಿಸುವ ಅಗತ್ಯವಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಯ ನಂತರದ ಚುನಾವಣಾ ಫಲಿತಾಂಶ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಆತಂಕ ಮೂಡಿಸಿದೆ. ಅಲ್ಲಿ ಮತದಾರರ ಪಟ್ಟಿಯಿಂದ ಲಕ್ಷಾಂತರ ಅಕ್ರಮ ವಲಸಿಗರನ್ನು ಕೈಬಿಟ್ಟ ನಂತರ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದೆ ಎಂಬ ರಾಜಕೀಯ ವಿಶ್ಲೇಷಣೆ ಹಿನ್ನೆಲೆಯಲ್ಲಿ, ಇದೇ ರೀತಿಯ ಪರಿಸ್ಥಿತಿ ರಾಜ್ಯದಲ್ಲೂ ಉಂಟಾಗಬಹುದೆಂಬ ಭಯ ಕಾಂಗ್ರೆಸ್ ವಲಯದಲ್ಲಿ ಮೂಡಿದೆ.

ಆದ್ದರಿಂದ, ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸುವ ಅಥವಾ ಅದರ ವಿರುದ್ಧ ಕಾನೂನುಬದ್ಧವಾಗಿ ಹೋರಾಟ ನಡೆಸುವ ಉದ್ದೇಶದಿಂದ ವಿವಿಧ ಸಂಘಟನೆಗಳೊಂದಿಗೆ ಸಂಪರ್ಕ ಸಾಧಿಸಿರುವ ಕಾಂಗ್ರೆಸ್ ನಾಯಕರು, ಮುಂದಿನ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರ ರೂಪಿಸುತ್ತಿದೆ

ಒಟ್ಟಿನಲ್ಲಿ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಎಸ್‌ಐಆರ್ ಪ್ರಕ್ರಿಯೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸರ್ಕಾರ ಮತ್ತು ರಾಜಕೀಯ ಪಕ್ಷಗಳ ನಡುವಿನ ತಂತ್ರಯುದ್ಧಕ್ಕೆ ವೇದಿಕೆ ಸಿದ್ಧವಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ.

ಮೊದಲ ‘ಗೈಡ್ ಅಸ್ತ್ರ’ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

TAGGED:The state Congress government was shocked by the election results in West Bengalwhat are its concerns?
Share This Article
Facebook Twitter Copy Link Print
Previous Article ಮೊದಲ ‘ಗೈಡ್ ಅಸ್ತ್ರ’ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
Next Article ಲೈಂಗಿಕ ದೌರ್ಜನ್ಯ ಕೇಸ್; ಕಂಬಕ್ಕೆ ಕಟ್ಟಿ ರೈಲ್ವೆ ಕಾನ್​ಸ್ಟೇಬಲ್​​ನನ್ನು ಕೊಂದ ಸಾರ್ವಜನಿಕರು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?