Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಲ್ಲಿ  ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ BMRCL, ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ  ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ.

ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಮುಖ್ಯಾಂಶಗಳು

ಬೆಂಗಳೂರಿನಲ್ಲೇ ಅತಿ ಉದ್ದದ ಮೆಟ್ರೋ ಮಾರ್ಗ ಎಂಬ ಹೆಗ್ಗಳಿಕೆ
ಐಟಿಬಿಟಿ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಸುಗಮ ಸಂಪರ್ಕ
ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬಿಎಂಆರ್​ಸಿಎಲ್​ ಮಾಸ್ಟರ್ ಪ್ಲಾನ್
ಕಾಳೇನ ಅಗ್ರಹಾರ ಟು ನಾಗವಾರ ಪಿಂಕ್ ಲೈನ್ ಮೆಟ್ರೋ ಮಾರ್ಗ ಓಪನ್ ಮಾಡಲು ಕೇವಲ ಒಂದು ತಿಂಗಳು ಮಾತ್ರ ಬಾಕಿಯಿದೆ. ಈ ಹಿನ್ನೆಲೆ ಐಟಿಬಿಟಿ ಪಾರ್ಕ್​ಗಳು, ಇಂಡಸ್ಟ್ರಿಯಲ್ ಟೌನ್​ಗಳನ್ನು ಸಂಪರ್ಕಿಸುವಂತೆ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲು ಬಿಎಂಆರ್​ಸಿಎಲ್​​ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಪಿಂಕ್‌ ಲೈನ್ ಮೆಟ್ರೋ ಮಾರ್ಗದಲ್ಲಿ 100ರಷ್ಟು ಕಾಮಗಾರಿ ಮುಗಿದಿದೆ. ಆರು ಎಲಿವೇಟೆಡ್ ಮೆಟ್ರೋ ಸ್ಟೇಷನ್​​ಗಳನ್ನು ಜೂನ್​ನಲ್ಲಿ ಓಪನ್ ಮಾಡಲು ಪ್ಲಾನ್ ಕೂಡ ಮಾಡಲಾಗಿದೆ.

ಇದೀಗ ಈ ಮಾರ್ಗವನ್ನು ಕಾಡುಗೋಡಿ ಟ್ರೀ ಪಾರ್ಕ್​​ವರೆಗೆ ವಿಸ್ತರಣೆ ಮಾಡಲು ಬಿಎಂಆರ್​​ಸಿಎಲ್​​ ಮುಂದಾಗಿದೆ. ಈ ಮಾರ್ಗ ಓಪನ್ ಆದರೆ ಬೆಂಗಳೂರಲ್ಲೇ ಅತಿ ಹೆಚ್ಚು ಉದ್ದದ ಮೆಟ್ರೋ ಮಾರ್ಗವಾಗಲಿದೆ. ಈ ಮಾರ್ಗವು ಕಾಳೇನ ಅಗ್ರಹಾರ (ಗೊಟ್ಟಿಗೆರೆ) ಜಿಗಣಿ, ಆನೇಕಲ್, ಅತ್ತಿಬೆಲೆ, ಸರ್ಜಾಪುರ, ವರ್ತೂರು, ಕಾಡುಗೋಡಿ ಟ್ರೀ ಪಾರ್ಕ್, ಚನ್ನಸಂದ್ರ ಹೋಫ್ ಫಾರ್ಮ್ (73 ಕಿ.ಮೀ) ಮಾರ್ಗದಲ್ಲಿ ಸಂಚಾರ ಮಾಡಲಿದೆ. ಈ ಮೆಟ್ರೋ ಮಾರ್ಗಕ್ಕಾಗಿ ಫಿಸಿಬಲಿಟಿ ಟೆಸ್ಟ್ ಮಾಡಿದ್ದು, ಅದರ ವರದಿ ಇದೀಗ ಬಿಎಂಆರ್​​ಸಿಎಲ್​ ಕೈಸೇರಿದೆ. ಆ ವರದಿಯನ್ನು ರಾಜ್ಯ ಸರ್ಕಾರಕ್ಕೂ ಸಲ್ಲಿಸಲಿದೆ.

ಇನ್ನು ಈ ಮಾರ್ಗದಲ್ಲಿ ಅಂದಾಜು 35 ಮೆಟ್ರೋ ಸ್ಟೇಷನ್​ಗಳನ್ನು ನಿರ್ಮಾಣ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ಇತ್ತ ಅತ್ತಿಬೆಲೆ ಬಳಿ ಕೆಹೆಚ್​​ಬಿ 90 ಸಾವಿರ ಆಸನಗಳ ಸಾಮರ್ಥ್ಯದ ಕ್ರೀಡಾಂಗಣವನ್ನು ನಿರ್ಮಾಣ ಮಾಡಲು ಮುಂದಾಗಿದ್ದು, ಪಿಂಕ್‌ ಲೈನ್ ವಿಸ್ತರಿಸುವುದರಿಂದ ಪ್ರೇಕ್ಷಕರು ಬಂದು ಹೋಗಲು ಸಹಾಯ ಆಗಲಿವಾಗಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮೆಟ್ರೋ ಪ್ರಯಾಣಿಕರು ಈ ಭಾಗದಲ್ಲಿ ಮೆಟ್ರೋ ಓಪನ್ ಆದರೆ ರಾಜಧಾನಿಯಲ್ಲಿ ತುಂಬಾ ದೊಡ್ಡಮಟ್ಟದಲ್ಲಿ ಟ್ರಾಫಿಕ್ ಕಡಿಮೆ ಆಗಲಿದೆ ಎಂದಿದ್ದಾರೆ.

40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಈ ಸಿಸ್ಟಮ್ ಯಾವಾಗಿಂದ ಜಾರಿ?

ಒಟ್ಟಾರೆಯಾಗಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಮಹತ್ವಾಕಾಂಕ್ಷಿ ಯೋಜನೆಗೆ ಹಸಿರು ನಿಶಾನೆ ತೋರಿದರೆ, ರಾಜಧಾನಿಯ ಜನರಿಗೆ ಸಂಚಾರದ ಸಂಕಷ್ಟದಿಂದ ದೊಡ್ಡ ಮಟ್ಟದ ವಿನಾಯಿತಿ ಸಿಗುವುದರಲ್ಲಿ ಯಾವುದೇ ಸಂಶಯವಿಲ್ಲ.

TAGGED:BMRCL ready to open longest metro in Bangalore
Share This Article
Facebook Twitter Copy Link Print
Previous Article 40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಈ ಸಿಸ್ಟಮ್ ಯಾವಾಗಿಂದ ಜಾರಿ?
Next Article ಇಂದಿನಿಂದ ಮೇ11 ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?