Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay TVK ಮ್ಯಾಜಿಕ್ ನಂಬರ್ ತಲುಪಲಾರದೆ ದಳಪತಿ ಕಂಗಾಲು: ಇಂದಿನ ವಿಜಯ್ ಪಟ್ಟಾಭಿಷೇಕಕ್ಕೆ ಮತ್ತೆ ರಾಜ್ಯಪಾಲರ ಬ್ರೇಕ್!
ದೇಶಪ್ರಮುಖ

Vijay TVK ಮ್ಯಾಜಿಕ್ ನಂಬರ್ ತಲುಪಲಾರದೆ ದಳಪತಿ ಕಂಗಾಲು: ಇಂದಿನ ವಿಜಯ್ ಪಟ್ಟಾಭಿಷೇಕಕ್ಕೆ ಮತ್ತೆ ರಾಜ್ಯಪಾಲರ ಬ್ರೇಕ್!

Share
2 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಕ್ಷಣಕ್ಕೊಂದು ತಿರುವು ಸಿಗುತ್ತಿದೆ. ನಾಳೆ (ಶನಿವಾರ) ಮುಖ್ಯಮಂತ್ರಿಯಾಗಿ ನಟ ವಿಜಯ್ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬ ನಿರೀಕ್ಷೆಗಳ ನಡುವೆಯೇ, ಈಗ ಲೋಕಭವನ (ರಾಜಭವನ) ಮೂಲಗಳಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.

https://youtube.com/shorts/gjYZnQ_VPsc?si=qVOf4mHBsp6RN8ZV

ರಾಜ್ಯದಲ್ಲಿ ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದ ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ವಿಜಯ್ ಅವರಿಗೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣವಚನ ಸ್ವೀಕರಿಸಲು ಅನುಮತಿ ನಿರಾಕರಿಸಿದ್ದಾರೆ.

ಶನಿವಾರ ಬೆಳಿಗ್ಗೆ ನಡೆಯಬೇಕಿದ್ದ ಪಟ್ಟಾಭಿಷೇಕದ ಆಸೆ ಈಗ ಕಮರಿಹೋಗಿದ್ದು, ಸಂಖ್ಯಾಬಲದ ಕೊರತೆಯೇ ವಿಜಯ್‌ಗೆ ಅತಿದೊಡ್ಡ ವಿಘ್ನವಾಗಿ ಪರಿಣಮಿಸಿದೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 118 ಶಾಸಕರ ಬೆಂಬಲ ಅಗತ್ಯವಿದೆ. ಆದರೆ, ವಿಜಯ್ ಅವರು ಕೇವಲ 116 ಶಾಸಕರ ಬೆಂಬಲವನ್ನು ಮಾತ್ರ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಹುಮತಕ್ಕೆ ಇನ್ನೂ ಇಬ್ಬರು ಶಾಸಕರ ಕೊರತೆಯಿದ್ದು, ರಾಜ್ಯಪಾಲರು ಕೇಳಿದಂತೆ ಬೆಂಬಲದ ಅಧಿಕೃತ ಪತ್ರಗಳನ್ನು ಒದಗಿಸಲು ವಿಜಯ್ ವಿಫಲರಾಗಿದ್ದಾರೆ.

ವಿಜಯ್ ಅವರು ವಿಸಿಕೆ (VCK), ಎಎಮ್‌ಎಂಕೆಯ ಟಿಟಿವಿ ದಿನಕರನ್ ಮತ್ತು ಐಯುಎಂಎಲ್ (IUML) ಪಕ್ಷಗಳ ಜೊತೆ ತೀವ್ರ ಮಾತುಕತೆ ನಡೆಸಿದ್ದರು. ಆದರೆ, ಅಂತಿಮ ಕ್ಷಣದಲ್ಲಿ ಐಯುಎಂಎಲ್ ತಾನು ಟಿವಿಕೆ ಮೈತ್ರಿಕೂಟದ ಭಾಗವಲ್ಲ ಎಂದು ಪತ್ರ ಬಿಡುಗಡೆ ಮಾಡಿದೆ. ಇತ್ತ ಟಿಟಿವಿ ದಿನಕರನ್ ಅವರು ಎಐಎಡಿಎಂಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಇನ್ನು ವಿಸಿಕೆ ಕೂಡ ಅಧಿಕೃತ ಬೆಂಬಲದ ಪತ್ರ ನೀಡಲು ಹಿಂದೇಟು ಹಾಕಿದೆ ಎನ್ನಲಾಗಿದೆ.

ಬಿಜೆಪಿಯಂತಹ ಕೋಮುವಾದಿ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳಬಾರದು ಎಂಬ ಷರತ್ತಿನ ಮೇಲೆ ಕಾಂಗ್ರೆಸ್ ವಿಜಯ್‌ಗೆ ಬೆಂಬಲ ನೀಡಿದೆ. ಈ ನಡುವೆ ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ 7 ವರ್ಷಗಳ ದೋಸ್ತಿ ಕಡಿದುಬಿದ್ದಿದ್ದು, ಪರಸ್ಪರ ‘ನಂಬಿಕೆ ದ್ರೋಹ’ದ ಆರೋಪಗಳು ಕೇಳಿಬರುತ್ತಿವೆ. ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ವಿಜಯ್ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುವುದಾಗಿ ಘೋಷಿಸಿವೆ.

ಒಟ್ಟಾರೆಯಾಗಿ, ತಮಿಳುನಾಡಿನ ಗದ್ದುಗೆ ಏರಲು ಸಜ್ಜಾಗಿದ್ದ ವಿಜಯ್ ಅವರಿಗೆ ಮಿತ್ರಪಕ್ಷಗಳ ಕೊನೆಕ್ಷಣದ ‘ಬೆಂಬಲ ವಾಪಸ್’ ಅಥವಾ ‘ಬೆಂಬಲ ನೀಡಲು ವಿಳಂಬ’ ಮಾಡುತ್ತಿರುವುದು ಭಾರಿ ಹಿನ್ನಡೆಯನ್ನುಂಟು ಮಾಡಿದೆ. ಈ ರಾಜಕೀಯ ಜಿದ್ದಾಜಿದ್ದಿ ನಾಳೆ ಯಾವ ತಿರುವು ಪಡೆಯಲಿದೆ ಎಂಬುದು ಇಡೀ ದೇಶದ ಕುತೂಹಲಕ್ಕೆ ಕಾರಣವಾಗಿದೆ.

https://www.newsics.com/2026/05/09/the-secret-to-your-health-lies-in-the-hair-growing-on-your-toes/

TAGGED:Thalapathy Kangaluunable to reach the magic number: Governor's break for today's Vijay coronation again!
Share This Article
Facebook Twitter Copy Link Print
Previous Article Toe Hair ಕಾಲ್ಬೆರಳುಗಳ ಮೇಲೆ ಬೆಳೆಯುವ ಕೂದಲಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ಗುಟ್ಟು
Next Article ಕೈದಿ ಜತೆ ಜೈಲಾಧಿಕಾರಿಗೆ ಪ್ರೀತಿ : ಕೊಲೆ ಆರೋಪಿಯನ್ನೇ ವರಿಸಿದ ಮಹಿಳಾ ಪೊಲೀಸ್ ಅಧಿಕಾರಿ!

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?