Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IFS topper ಕರ್ನಾಟಕದ ರೈತನ ಮಗನಿಗೆ ಐಎಫ್ಎಸ್ ಟಾಪರ್ ಪಟ್ಟ!
ಕರ್ನಾಟಕಕೃಷಿದೇಶಪ್ರಮುಖ

IFS topper ಕರ್ನಾಟಕದ ರೈತನ ಮಗನಿಗೆ ಐಎಫ್ಎಸ್ ಟಾಪರ್ ಪಟ್ಟ!

Share
2 Min Read
SHARE

newsics.com/ನ್ಯೂಸಿಕ್ಸ್ 

ಚಿಕ್ಕೋಡಿ(ಬೆಳಗಾವಿ): ಕೇಂದ್ರ ಲೋಕಸೇವಾ ಆಯೋಗ (UPSC)ವು ಭಾರತೀಯ ಅರಣ್ಯ ಸೇವೆ (ಇಂಡಿಯನ್ ಫಾರೆಸ್ಟ್ ಸರ್ವೀಸ್) ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಕನ್ನಡಿಗನಿಗೆ ಪ್ರಥಮ ರ‍್ಯಾಂಕ್ ಲಭಿಸಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದ ಬಸವರಾಜ್ ದರೇಪ್ಪ ಕೆಂಪವಾಡ ಅವರು ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಗಳಿಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ. ಸಾಮಾನ್ಯ ರೈತನ ಮಗನ ಅದ್ವಿತೀಯ ಸಾಧನೆಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

ಸತತ ಪರಿಶ್ರಮದಿಂದ ಬಸವರಾಜ್ ಅವರು ಕೇವಲ ತಮ್ಮ ಎರಡನೇ ಪ್ರಯತ್ನದಲ್ಲಿಯೇ ಟಾಪರ್ ಆಗಿದ್ದಾರೆ. ಇವರ ಅಪ್ರತಿಮ ಸಾಧನೆಯಿಂದ ಕುಟುಂಬಸ್ಥರಲ್ಲಿ ಹಾಗೂ ಸವದಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಹುಟ್ಟೂರಲ್ಲಿ ಪ್ರಾಥಮಿಕ ಶಿಕ್ಷಣ: ಸಾಮಾನ್ಯ ರೈತನ ಪುತ್ರನಾಗಿರುವ ಬಸವರಾಜ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರು ಸವದಿ ಗ್ರಾಮದಲ್ಲೇ ಪೂರೈಸಿದ್ದರು. ಬಳಿಕ ಅಥಣಿ ಪಟ್ಟಣದಲ್ಲಿ ಮುಂದಿನ ವಿದ್ಯಾಭ್ಯಾಸ ಮುಗಿಸಿ ನಂತರ ಶಿರಸಿಯ ಕಾಲೇಜಿನಲ್ಲಿ ಪದವಿ ವ್ಯಾಸಂಗ ಪಡೆದರು. ಪದವಿ ನಂತರ ಬೆಂಗಳೂರಿನಲ್ಲಿ ಯುಪಿಎಸ್​ಸಿ ಪರೀಕ್ಷೆಗಾಗಿ ಕಠಿಣ ಸಿದ್ಧತೆ ನಡೆಸಿದ್ದರು.

​’ನನ್ನ ಸತತ ಪ್ರಯತ್ನದ ಫಲವಾಗಿ ಈ ಸಾಧನೆ ಮಾಡಲು ಸಾಧ್ಯವಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಕಲಿತ ನಾನು, ಓರ್ವ ರೈತನ ಮಗನಾಗಿ ಈ ಹಂತಕ್ಕೆ ತಲುಪಿದ್ದು ನನಗೆ ಅತೀವ ಹೆಮ್ಮೆ ತಂದಿದೆ’ ಎಂದು ಐಎಫ್​ಎಸ್ ಟಾಪರ್ ಹರ್ಷ ವ್ಯಕ್ತಪಡಿಸಿದರು.

‘​ನಾನು ಯಾವುದೇ ವಿಶೇಷ ಕೋರ್ಸ್‌ಗಳ ಮೊರೆಹೋಗಲಿಲ್ಲ. ಹಿರಿಯರ ನಿರಂತರ ಮಾರ್ಗದರ್ಶನದಂತೆ ಓದಿ ಈ ಪರೀಕ್ಷೆಯಲ್ಲಿ ಉತ್ತೀರ್ಣನಾಗಲು ಸಾಧ್ಯವಾಯಿತು. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿದ್ದು, ಇನ್ನು ಎರಡು-ಮೂರು ದಿನಗಳಲ್ಲಿ ನನ್ನ ಸ್ವಗ್ರಾಮಕ್ಕೆ ಆಗಮಿಸುತ್ತೇನೆ’ ಎಂದು ಬಸವರಾಜ್ ತಿಳಿಸಿದ್ದಾರೆ.

ಗ್ರಾಮದಲ್ಲಿ ಸಂಭ್ರಮ: ​ಗ್ರಾಮದ ಹೆಮ್ಮೆಯ ಪುತ್ರನ ಸಾಧನೆಗೆ ಇಡೀ ಊರೇ ಸಂಭ್ರಮಿಸುತ್ತಿದ್ದು, ಬಸವರಾಜ್ ಅವರ ಆಗಮನಕ್ಕಾಗಿ ಗ್ರಾಮಸ್ಥರು ಕಾತುರದಿಂದ ಕಾಯುತ್ತಿದ್ದಾರೆ.

ಮೂವರ ಸಾಧನೆ: 

ಐಎಫ್​ಎಸ್ ಟಾಪರ್ಸ್​: ಐಎಫ್​ಎಸ್ ಫಲಿತಾಂಶದಲ್ಲಿ ಕರ್ನಾಟಕದ ಬಸವರಾಜ್ ಪ್ರಥಮ ಸ್ಥಾನ ಗಳಿಸಿದ್ದಾರೆ.  ಅಂಶುಮನ್ ಕುಮಾರ್ ದ್ವಿತೀಯ ರ‍್ಯಾಂಕ್ ಮತ್ತು ಸಿದ್ಧಾರ್ಥ್ ತೃತೀಯ ರ‍್ಯಾಂಕ್ ಪಡೆದಿದ್ದಾರೆ.

ಯುಪಿಎಸ್​ಸಿಯಲ್ಲಿ ಬೆಳಗಾವಿ ಯುವಕರ ಸಾಧನೆ: ಕಳೆದ ತಿಂಗಳು ಪ್ರಕಟವಾದ ಯುಪಿಎಸ್​ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಲ್ಲೆಯ ಯುವಕರು ಸಾಧನೆ ಮಾಡಿ, ಗಮನ ಸೆಳೆದಿದ್ದರು. ಬೆಳಗಾವಿಯ ರಾಹುಲ್ ಪಾಟೀಲ್ 224ನೇ ರ‍್ಯಾಂಕ್, ಬಸವರಾಜ್ ಪಾಟೀಲ್ 739ನೇ ಶ್ರೇಯಾಂಕ ಗಳಿಸಿ ಗಮನ ಸೆಳೆದಿದ್ದರು.

 

ನಂಬರ್​​ ಗೇಮ್​​ನಲ್ಲಿ ದಳಪತಿ​ ವಿನ್​​! ಟಿವಿಕೆ ಸರ್ಕಾರದಲ್ಲಿ ಇಬ್ಬರು ಡಿಸಿಎಂ?

TAGGED:Karnataka farmer's son becomes IFS topper!
Share This Article
Facebook Twitter Copy Link Print
Previous Article ನಂಬರ್​​ ಗೇಮ್​​ನಲ್ಲಿ ದಳಪತಿ​ ವಿನ್!​​; ಟಿವಿಕೆ ಸರ್ಕಾರದಲ್ಲಿ ಇಬ್ಬರು ಡಿಸಿಎಂ?
Next Article ಸುವೇಂದು ಸಿಎಂ ಆಗ್ತಿದ್ದಂತೆ ಅತೀ ದೊಡ್ಡ ಬದಲಾವಣೆ ಮಾಡಿದ ಮಮತಾ!

Popular Posts

Pressure Cooker ನಿಮ್ಮ ಮನೆಯ ಕುಕ್ಕರ್ ವಿಷಲ್ ಸರಿಯಾಗಿ ಬರ್ತಿಲ್ವಾ? ಜಿಡ್ಡು ಮತ್ತು ಕೊಳಕು ನಿವಾರಣೆಗೆ ಇಲ್ಲಿದೆ ಸಿಂಪಲ್ ಟಿಪ್ಸ್

1 Min Read

Landslide ವರುಣನ ಆರ್ಭಟ; ಭೀಕರ ಪ್ರವಾಹ, ಭೂಕುಸಿತಕ್ಕೆ 11 ಬಲಿ, ಹೈ ಅಲರ್ಟ್ ಘೋಷಣೆ

2 Min Read

Tattoo HIV Case ಟ್ಯಾಟೂ ಪ್ರೇಮಿಗಳೇ ಎಚ್ಚರ..! ಹಚ್ಚೆ ಹಾಕಿಸಿಕೊಂಡ ಮಹಿಳೆಗೆ ತಗುಲಿದ ಎಚ್‌ಐವಿ ಸೋಂಕು

2 Min Read

Wall Fungus ಮಳೆಗಾಲದಲ್ಲಿ ಗೋಡೆಗಳ ಮೇಲೆ ಬೂಷ್ಟು ಸಮಸ್ಯೆಯೇ? ದುಬಾರಿ ಕೆಮಿಕಲ್ ಬೇಡ, ಮನೆಯಲ್ಲೇ ಇದೆ ಸುಲಭ ಪರಿಹಾರ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Pregnancy Skincare Guide ಗರ್ಭಿಣಿಯರೇ ಎಚ್ಚರ..! ನೀವು ಬಳಸುವ ಮೇಕಪ್ ಪ್ರಾಡಕ್ಟ್ ಮಗುವಿಗೆ ಸೇಫ್ ಅಲ್ವಾ? ತಪ್ಪದೇ ಓದಿ ಈ ಸ್ಟೋರಿ

2 Min Read
ದೇಶಆರೋಗ್ಯಪ್ರಮುಖ

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

3 Min Read
ದೇಶಪ್ರಮುಖ

Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!

2 Min Read
ದೇಶಪ್ರಮುಖ

Today Gold Rate | ಚಿನ್ನದ ಬೆಲೆ ಮತ್ತೆ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?