newsics.com/ನ್ಯೂಸಿಕ್ಸ್
ಕನ್ನಡ ಚಿತ್ರರಂಗದ ಇಮೇಜ್ ಅನ್ನೇ ಬದಲಿಸಿದ್ದು ರಾಜ್ ಬಿ ಶೆಟ್ಟಿ. ವಿಭಿನ್ನ ಸಿನಿಮಾಗಳ ಮೂಲಕ ಕನ್ನಡಿಗರನ್ನು ಥಿಯೇಟರ್ ಕಡೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.ರಾಜ್ ಬಿ ಶೆಟ್ಟಿ ನಿರ್ದೇಶಿಸಿದ ‘ಗರುಡ ಗಮನ ವೃಷಭ ವಾಹನ’, ‘ಟೋಬಿ’ ಅಂತಹ ಸಿನಿಮಾಗಳು ಕನ್ನಡ ಚಿತ್ರರಂಗಕ್ಕೆ ನಿಜಕ್ಕೂ ಹೊಸ ಇಮೇಜ್ ಕೊಟ್ಟಿವೆ. ಅದರಲ್ಲೂ ರಾಜ್ ಬಿ ಶೆಟ್ಟಿ ನಿರ್ಮಿಸಿದ ‘ಸು ಫ್ರಮ್ ಸೋ’ ಬಾಕ್ಸಾಫೀಸ್‌ನಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ.
ರಾಜ್ ಬಿ ಶೆಟ್ಟಿ ಟ್ಯಾಲೆಂಟ್ ಕನ್ನಡ ಅಲ್ಲದೇ ಮಲಯಾಳಂ ಚಿತ್ರರಂಗಕ್ಕೂ ಗೊತ್ತಿದೆ. ಹೀಗಾಗಿ ಈಗಾಗಲೇ ರಾಜ್ ಬಿ ಶೆಟ್ಟಿ ಮಲಯಾಳಂ ಸೂಪರ್‌ಸ್ಟಾರ್‌ಗಳ ಜೊತೆ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರಿಗೂ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈಗ ಇನ್ನೊಂದು ಹೆಜ್ಜೆ ಮುಂದಿಟ್ಟಿದ್ದಾರೆ. ‘ಗರುಡ ಗಮನ ವೃಷಭ ವಾಹನ’ ಲುಕ್‌ನಲ್ಲಿ ಬಾಲಿವುಡ್‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ.
ರಾಜ್ ಬಿ ಶೆಟ್ಟಿ ಅವರು ಹಿಂದಿಯಲ್ಲಿ ನಟಿಸಿರುವ ಮೊದಲ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಉತ್ತರ ಭಾರತದ ಸಿನಿಮಾ ಪ್ರೇಮಿ ಇನ್ಫ್ಲ್ಯುಯೆನ್ಸರ್ಗಳು ರಾಜ್ ಬಿ ಶೆಟ್ಟಿಯ ಮೇಲೆ ಕಣ್ಣಿಟ್ಟಿದ್ದಾರೆ. ರಾಜ್ ಬಿ ಶೆಟ್ಟಿ, ‘ಬಂದರ್’ ಹೆಸರಿನ ಹಿಂದಿ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಟ್ರೈಲರ್ನಲ್ಲಿ ರಾಜ್ ಬಿ ಶೆಟ್ಟಿ ಸಹ ಕಾಣಿಸಿಕೊಂಡಿದ್ದಾರೆ.
ರಾಜ್ ಬಿ ಶೆಟ್ಟಿ ಅವರ ‘ಗರುಡ ಗಮನ’ ದಲ್ಲಿದ್ದ ರೀತಿಯ ಪಾತ್ರದಲ್ಲಿಯೇ ಕಾಣಿಸಿಕೊಂಡಿರುವಂತಿದೆ. ವಿಲನ್ ಗುಂಪಿನ ಸದಸ್ಯರಾಗಿ ರಾಜ್ ಬಿ ಶೆಟ್ಟಿ ನಟಿಸಿದಂತಿದೆ.
ಸಿನಿಮಾವನ್ನು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶಿಸಿದ್ದಾರೆ. ಸಹ ನಿರ್ದೇಶಕ ಸಾಕ್ಷಿ ಮೆಹ್ತಾ ಅವರದ್ದು. ಕತೆ ಬರೆದಿರುವುದು ಸುದೀಪ್ ಶರ್ಮಾ, ಅಭಿಷೇಕ್ ಬ್ಯಾನರ್ಜಿ. ಸಿನಿಮಾ ಜೂನ್ 5 ಕ್ಕೆ ಬಿಡುಗಡೆ ಆಗಲಿದೆ.
https://youtu.be/QMCoKp7PsZM?si=FozVl4a5CAslXw4b
https://www.newsics.com/2026/05/10/chitradurga-in-charge-minister-d-sudhakar-passes-away/