newsics.com/ನ್ಯೂಸಿಕ್ಸ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಘಟನೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದು, ಆರ್ಟ್ ಆಫ್ ಲಿವಿಂಗ್ ನ 47ನೇ ವಾರ್ಷಿಕ ಕಾರ್ಯಕ್ರಮ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಗೆ ಭೇಟಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ ಕನಕಪುರ ರಸ್ತೆಯಲ್ಲಿ ಕಗ್ಗಲಿಪುರದ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.
ಇದೀಗ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹೈದರಾಬಾದ್ ಪ್ರಯಾಣ ವಿಳಂಬವಾಗಿದೆ. ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಅಜ್ಞಾತ ಸ್ಥಳದಲ್ಲಿ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ.