Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯಲು ಈ ರೀತಿ ಮಾಡಿ
ಕರ್ನಾಟಕಪ್ರಮುಖ

ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯಲು ಈ ರೀತಿ ಮಾಡಿ

Share
2 Min Read
SHARE

newsics.com/ನ್ಯೂಸಿಕ್ಸ್

ಸಣ್ಣ ಮಕ್ಕಳ ಹೊಟ್ಟೆಯಲ್ಲಿ ಹುಳುಗಳು  ಕಾಣಿಸುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡಿದರೆ ಮಕ್ಕಳ ಆರೋಗ್ಯ ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅಸ್ವಚ್ಛತೆ, ಕೈ ತೊಳೆಯದೇ ಊಟ ಮಾಡುವುದು ಹಾಗೂ ಮಣ್ಣು ಅಥವಾ ಕಲುಷಿತ ವಸ್ತುಗಳ ಸಂಪರ್ಕದಿಂದ ಈ ಸಮಸ್ಯೆ ಹೆಚ್ಚಾಗುತ್ತದೆ. ತಜ್ಞರ ಪ್ರಕಾರ, ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಇಂತಹ ಸೋಂಕಿಗೆ ಬೇಗ ಒಳಗಾಗುವ ಸಾಧ್ಯತೆ ಇರುತ್ತದೆ. ಹೊರಗೆ ಆಟವಾಡುವಾಗ ಮಣ್ಣನ್ನು ಮುಟ್ಟುವುದು, ಕಲುಷಿತ ಆಹಾರ ಸೇವಿಸುವುದು ಅಥವಾ ಕೈಗಳನ್ನು ಬಾಯಿಗೆ ಹಾಕುವ ಅಭ್ಯಾಸದಿಂದ ಹುಳುಗಳ ಸೋಂಕು ಉಂಟಾಗಬಹುದು. ಹಾಗಾದರೆ ಈ ರೀತಿಯಾದಾಗ ಯಾವ ರೀತಿಯ ಲಕ್ಷಣ ಕಂಡುಬರುತ್ತದೆ, ಹೇಗೆ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಜಂತುಹುಳುವಿನ ಸಮಸ್ಯೆ ಹೆಚ್ಚಾದಾಗ ಕಂಡುಬರುವ ಲಕ್ಷಣಗಳು:

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ಹೊಟ್ಟೆಯಲ್ಲಿ ಹುಳುಗಳಿದ್ದರೆ ಮಕ್ಕಳಲ್ಲಿ ಹಲವು ರೀತಿಯ ಲಕ್ಷಣಗಳು ಕಾಣಿಸಬಹುದು. ಪದೇಪದೇ ಹೊಟ್ಟೆನೋವು, ಹಸಿವು ಕಡಿಮೆಯಾಗುವುದು ಅಥವಾ ಅತಿಯಾಗಿ ಹಸಿವು ಕಾಣಿಸುವುದು ಪ್ರಮುಖ ಲಕ್ಷಣಗಳಾಗಿವೆ. ಇದರ ಜೊತೆಗೆ ದೌರ್ಬಲ್ಯ, ಬೇಗ ದಣಿವಾಗುವುದು, ಹೊಟ್ಟೆ ಉಬ್ಬುವುದು, ತೂಕ ಕಡಿಮೆಯಾಗುವುದು, ವಾಂತಿ ಸೇರಿದಂತೆ ನಾನಾ ರೀತಿಯ ಸಮಸ್ಯೆ ಕಾಣಿಸಬಹುದು. ಕೆಲ ಮಕ್ಕಳಲ್ಲಿ ರಾತ್ರಿ ಸಮಯದಲ್ಲಿ ಗುದದ ಸುತ್ತ ತೀವ್ರ ತುರಿಕೆ ಉಂಟಾಗುವುದು ಸಹ ಸಾಮಾನ್ಯ ಲಕ್ಷಣವಾಗಿದೆ. ಇಂತಹ ಲಕ್ಷಣಗಳು ದೀರ್ಘಕಾಲ ಮುಂದುವರಿದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ ಎಂದು ತಜ್ಞರು ತಿಳಿಸಿದ್ದಾರೆ.

ಹೇಗೆ ಮುನ್ನೆಚ್ಚರಿಕೆ ವಹಿಸಬೇಕು?

ಮಕ್ಕಳಿಗೆ ಊಟಕ್ಕೂ ಮೊದಲು ಮತ್ತು ಹೊರಗಿನಿಂದ ಮನೆಗೆ ಬಂದ ನಂತರ ಕೈ ತೊಳೆಯುವ ಅಭ್ಯಾಸ ಮಾಡಿಸಬೇಕು. ಶುದ್ಧ ಮತ್ತು ತಾಜಾ ಆಹಾರ ನೀಡುವುದು ಅಗತ್ಯ. ಜೊತೆಗೆ ಮಕ್ಕಳು ಮಣ್ಣು ಅಥವಾ ಅಶುದ್ಧ ವಸ್ತುಗಳನ್ನು ಬಾಯಿಗೆ ಹಾಕದಂತೆ ಗಮನಿಸುವುದು ಮುಖ್ಯ. ವೈದ್ಯರ ಸಲಹೆಯಂತೆ ಸಮಯಕ್ಕೊಮ್ಮೆ ಡಿವೋರ್ಮಿಂಗ್ ಔಷಧಿ ನೀಡುವುದರಿಂದ ಈ ಸಮಸ್ಯೆಯನ್ನು ತಡೆಯಬಹುದು. ಮಕ್ಕಳಲ್ಲಿ ತೀವ್ರ ಹೊಟ್ಟೆನೋವು, ತೂಕ ಇಳಿಕೆ ಅಥವಾ ನಿರಂತರ ವಾಂತಿ ಕಂಡುಬಂದರೆ ತಕ್ಷಣ ವೈದ್ಯರ ಸಲಹೆ ಪಡೆಯುವುದು ಅಗತ್ಯವಾಗಿದೆ.

ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ

TAGGED:How to know if children have worms in their stomach? Here is the best idea
Share This Article
Facebook Twitter Copy Link Print
Previous Article ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ
Next Article ಮಲಗುವ ಮುನ್ನ ಪಾದಗಳನ್ನು ತೊಳೆಯದಿದ್ದರೆ ಏನೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತೆ?

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?