Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮಲಗುವ ಮುನ್ನ ಪಾದಗಳನ್ನು ತೊಳೆಯದಿದ್ದರೆ ಏನೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತೆ?
ಲೈಫ್‌ಸ್ಟೈಲ್ಆರೋಗ್ಯ

ಮಲಗುವ ಮುನ್ನ ಪಾದಗಳನ್ನು ತೊಳೆಯದಿದ್ದರೆ ಏನೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತೆ?

Share
1 Min Read
SHARE

ವೈಯಕ್ತಿಕ ನೈರ್ಮಲ್ಯದ (Hygiene) ಬಗ್ಗೆ ಪ್ರತಿಯೊಬ್ಬರೂ ಸಹ ಕಾಳಜಿ ವಹಿಸಬೇಕು. ಇದು ಸೋಂಕುಗಳನ್ನು ತಡೆಗಟ್ಟಲು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ನೈರ್ಮಲ್ಯದ ದೃಷ್ಟಿಯಿಂದ ನಾವು ಪ್ರತಿನಿತ್ಯ ಸ್ನಾನ ಮಾಡುತ್ತೇವೆ ಮತ್ತು ಆಗಾಗ್ಗೆ ಕೈಗಳನ್ನು ತೊಳೆದುಕೊಳ್ಳುತ್ತೇವೆ.

ಕಾಲುಗಳ ಆರೈಕೆಯ ಬಗ್ಗೆ ಅಷ್ಟಾಗಿ ಗಮನ ಹರಿಸುವುದಿಲ್ಲ. ಅದರಲ್ಲೂ ಮಲಗುವ ಮುನ್ನ ಕಡ್ಡಾಯವಾಗಿ ಪಾದಗಳನ್ನು ತೊಳೆದೇ ಮಲಗಬೇಕು ಎಂಬುದು ಅನೇಕರಿಗೆ ಗೊತ್ತೇ ಇಲ್ಲ. ತಜ್ಞರು ಹೇಳುವಂತೆ, ವಿಶೇಷವಾಗಿ ಮಲಗುವ ಮೊದಲು, ಪಾದಗಳನ್ನು ತೊಳೆಯದಿದ್ದರೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.

ತಜ್ಞರ ಪ್ರಕಾರ, ಪ್ರತಿಯೊಬ್ಬರೂ ಮಲಗುವ ಮೊದಲು ತಮ್ಮ ಪಾದಗಳನ್ನು ತೊಳೆಯಬೇಕು. ನಮ್ಮ ಪಾದಗಳು ಆಗಾಗ್ಗೆ ನೆಲವನ್ನು ಸ್ಪರ್ಶಿಸುವುದರಿಂದ, ಧೂಳು ಮತ್ತು ಸೂಕ್ಷ್ಮಜೀವಿಗಳು ಅವುಗಳಿಗೆ ಅಂಟಿಕೊಳ್ಳಬಹುದು. ಹಾಗಾಗಿ ಪಾದಗಳನ್ನು ತೊಳೆಯದೆ ಮಲಗುವುದರಿಂದ, ಈ ಧೂಳು ಮತ್ತು ಸೂಕ್ಷ್ಮಜೀವಿಗಳು ಮೂಗು, ಬಾಯಿ ಮತ್ತು ಚರ್ಮವನ್ನು ಸುಲಭವಾಗಿ ತಲುಪಬಹುದು, ಇದರಿಂದಾಗಿ ಸೋಂಕು ಉಂಟಾಗುತ್ತದೆ. ಹೀಗಿರುವಾಗ ನಿಮ್ಮ ಪಾದಗಳನ್ನು ತೊಳೆಯುವುದರಿಂದ ಸೋಂಕಿನ ಅಪಾಯ ಕಡಿಮೆಯಾಗುತ್ತದೆ. ಅಲ್ಲದೆ ರಾತ್ರಿ ಮಲಗುವ ಮುನ್ನ ಪಾದಗಳನ್ನು ತೊಳೆಯುವುದು ಕೊಳಕು ಮತ್ತು ಸೂಕ್ಷ್ಮಜೀವಿಗಳು ನಿಮ್ಮ ಹಾಸಿಗೆಯ ಮೇಲೆ ಬರದಂತೆ ತಡೆಯಲು ಇರುವಂತಹ ಆರೋಗ್ಯಕರ ಮಾರ್ಗವಾಗಿದೆ.

ಕಾಲು ತೊಳೆಯದೆ ಮಲಗುವುದರಿಂದ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ಸೋಂಕು ಉಂಟಾಗುತ್ತದೆ. ಇದು ಪಾದಗಳ ಮೇಲೆ ಚರ್ಮದ ಸಮಸ್ಯೆಗಳಿಗೆ ಕಾರಣವಾಗಬಹುದು ಹೌದು ತುರಿಕೆ, ಕೆಂಪು, ಬಿರುಕು ಬಿಟ್ಟ ಹಿಮ್ಮಡಿಗಳು, ಗುಳ್ಳೆಗಳು ಮತ್ತು ಊತ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷಣಗಳು ವಿಶೇಷವಾಗಿ ಕ್ರೀಡಾಪಟುಗಳು ಮತ್ತು ವಿದ್ಯಾರ್ಥಿಗಳಲ್ಲಿ, ದೀರ್ಘಕಾಲದವರೆಗೆ ಬೂಟುಗಳನ್ನು ಧರಿಸುವಲ್ಲಿ ಕಂಡುಬರುತ್ತವೆ.

ವೈದ್ಯರ ಪ್ರಕಾರ, ಎಲ್ಲರೂ ಮಲಗುವ ಮುನ್ನ ತಮ್ಮ ಪಾದಗಳನ್ನು ತೊಳೆಯಬೇಕು, ಆದರೆ ಮಧುಮೇಹಿಗಳು ವಿಶೇಷವಾಗಿ ಜಾಗರೂಕರಾಗಿರಬೇಕು. ಅವರು ಪಾದಗಳ ನೈರ್ಮಲ್ಯದ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸಬೇಕು. ಏಕೆಂದರೆ ಮಧುಮೇಹಿಗಳು ಕಡಿಮೆ ರೋಗನಿರೋಧಕ ಶಕ್ತಿಯಿಂದಾಗಿ ಸೋಂಕುಗಳಿಗೆ ಹೆಚ್ಚು ಒಳಗಾಗುತ್ತಾರೆ. ಆದ್ದರಿಂದ, ಅವರು ಜಾಗರೂಕರಾಗಿರಬೇಕು ಮತ್ತು ಮಲಗುವ ಮುನ್ನ ತಮ್ಮ ಪಾದಗಳನ್ನು ತೊಳೆಯಲೇಬೇಕು.

ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ

TAGGED:What problems arise if you don't wash your feet before going to bed?
Share This Article
Facebook Twitter Copy Link Print
Previous Article ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯಲು ಈ ರೀತಿ ಮಾಡಿ
Next Article ಪ್ರಮಾಣವಚನ ಸ್ವೀಕರಿಸುವಾಗ ಮುದ್ರಿತ ಪ್ರತಿ ನೋಡದೇ ʼಭಾಷಣʼ ಮಾಡಿದ ವಿಜಯ್; ಮಧ್ಯಪ್ರವೇಶಿಸಿ ತಡೆದ ರಾಜ್ಯಪಾಲರು!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?