newsics.com/ನ್ಯೂಸಿಕ್ಸ್
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ಸಿಎಂ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಹೊಸ ತಟ್ವಿಸ್ಟ್ ಸಿಕ್ಕಿದೆ.
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನಾಗಿದ್ದ ಚಂದ್ರನಾಥ್ ರಾಥ್ ಹತ್ಯೆ ಪೂರ್ವನಿಯೋಜಿತವಾಗಿದ್ದು, ಇದಕ್ಕಾಗಿ ಸುಮಾರು 45 ದಿನಗಳ ಹಿಂದೆಯೇ ಸಂಚು ರೂಪಿಸಲಾಗಿತ್ತು ಎಂಬ ಶಂಕೆ ತನಿಖಾಧಿಕಾರಿಗಳಿಗೆ ವ್ಯಕ್ತವಾಗಿದೆ. ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಹಲವು ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಚಂದ್ರನಾಥ್ ರಾಥ್ ಸಂಚರಿಸುತ್ತಿದ್ದ ಮಾರ್ಗ, ಅವರ ದಿನಚರಿ ಹಾಗೂ ಭದ್ರತಾ ಚಲನವಲನಗಳ ಬಗ್ಗೆ ಹಂತ ಹಂತವಾಗಿ ಮಾಹಿತಿ ಸಂಗ್ರಹಿಸಲಾಗಿತ್ತು. ಹತ್ಯೆಗೆ ಬಳಸಿದ ವಾಹನವನ್ನು ಜಾರ್ಖಂಡ್ನಿಂದ ತರಿಸಲಾಗಿತ್ತು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಕಾರಿನ ನಂಬರ್ಪ್ಲೇಟ್ ಹಾಗೂ ಚಾಸಿಸ್ ಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗಿದ್ದು, ಆರೋಪಿಗಳು ಯಾವುದೇ ಸುಳಿವು ಬಿಟ್ಟುಕೊಡದಂತೆ ಸೂಕ್ಷ್ಮವಾಗಿ ಯೋಜನೆ ರೂಪಿಸಿದ್ದರೆಂದು ಪೊಲೀಸರು ಶಂಕಿಸುತ್ತಿದ್ದಾರೆ.
ದಾಳಿಯಲ್ಲಿ ರಾಥ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಅವರ ಚಾಲಕರಿಗೂ ಗುಂಡೇಟು ತಗುಲಿ, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳದಲ್ಲೇ ಹಲವು ಕಾರ್ತೂಸ್ಗಳು ಪತ್ತೆಯಾಗಿದ್ದು, ವೃತ್ತಿಪರ ಶೂಟರ್ಗಳ ಕೈವಾಡ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳ ಸಿಐಡಿ ವಹಿಸಿಕೊಂಡಿದೆ. ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ಕಾಲ್ ಡೇಟಾ ಹಾಗೂ ಸ್ಥಳೀಯ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ.
https://www.newsics.com/2026/05/11/cm-vijays-much-awaited-jana-nayagan-release-date-fixed/