newsics.com/ನ್ಯೂಸಿಕ್ಸ್
ರೈಲಿನಲ್ಲಿ ಮಲಗಿದ್ದ ಯುವತಿ ಮೇಲೆ ವೃದ್ಧನ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಹರಿದಾಡುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
https://youtube.com/shorts/QmBsVJxCxsg?si=FaYAZtjO3Xv8e1rn
ವೈರಲ್ ಆಗಿರುವ ವಿಡಿಯೋದಲ್ಲಿ ಚಲಿಸುವ ರೈಲಿನಲ್ಲಿ ಮಹಿಳೆಯೊಬ್ಬರು ಸೀಟಿನಲ್ಲಿ ಮಲಗಿರುವುದು ಕಂಡುಬರುತ್ತದೆ. ಇದೇ ವೇಳೆ ಪಕ್ಕದಲ್ಲೇ ಕುಳಿತಿದ್ದ ವೃದ್ಧನೊಬ್ಬ ಆಕೆಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡು ವಿಕೃತಿ ಮೆರೆದಿದ್ದಾನೆ. ತಾನು ಕೂಡ ನಿದ್ರೆ ಮಾಡುತ್ತಿರುವಂತೆ ನಟಿಸುತ್ತಾ, ಆಕೆಯ ಮೇಲೆ ಪದೇ ಪದೇ ವಾಲುವುದು ಹಾಗೂ ಅಸಭ್ಯವಾಗಿ ಸ್ಪರ್ಶಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಪಕ್ಕದಲ್ಲಿದ್ದ ಪ್ರಯಾಣಿಕರು ಈ ಘಟನೆಯನ್ನು ಗಮನಿಸಿ ವಿಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡಿದ್ದಾರೆ. ವೃದ್ಧನ ಈ ನಾಚಿಕೆಗೇಡಿನ ವರ್ತನೆಗೆ ಇಂಟರ್ನೆಟ್ ಲೋಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ವಯಸ್ಸಿಗೆ ಗೌರವ ಕೊಡಬೇಕಾದವರೇ ಇಂತಹ ನೀಚ ಕೆಲಸಕ್ಕೆ ಕೈಹಾಕಿದರೆ ಹೆಣ್ಣುಮಕ್ಕಳು ಯಾರನ್ನು ನಂಬಬೇಕು ಎಂದು ಜನರು ಪ್ರಶ್ನಿಸುತ್ತಿದ್ದಾರೆ.