Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್‌ ಗಿಫ್ಟ್‌!
ಪ್ರಮುಖಕರ್ನಾಟಕ

ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್‌ ಗಿಫ್ಟ್‌!

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ.

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1, 2026ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯ ದರಗಳನ್ನು ಹೆಚ್ಚಳ ಮಾಡಿ ಆದೇಶ ಮಾಡಿದೆ. ಪ್ರಸ್ತುತ ಮೂಲ ವೇತನದ ಶೇ.14.25 ರಿಂದ ಶೇ.15.75 ಗೆ ಪರಿಷ್ಕರಿಸಿ ಡಿಎ ಏರಿಕೆ ಮಂಜೂರು ಮಾಡಿದೆ. ಏಪ್ರಿಲ್‌ ನಲ್ಲಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ.2 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರ ತನ್ನ ನೌಕರರಿಗೆ ಶೇ. 1.50 ರಷ್ಟು ಡಿಎ ಹೆಚ್ಚಳ ಮಾಡಿ ಆದೇಶಿಸಿದ್ದು ಗುಡ್‌ ನ್ಯೂಸ್‌ ಇದಾಗಿದೆ.

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರ ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ನೌಕರನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿಯನ್ನು ಸಹ ಇದರಲ್ಲೇ ಸೇರಿಸಲಾಗುವುದು.

ಅದೇ ರೀತಿ 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮದಡಿ ನೌಕರನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ ಹಾಗೂ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಸಿಬ್ಬಂದಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳನ್ನು ಸೇರಿಸಿ ಅದರ ಮೇಲೆ ತುಟ್ಟಿಭತ್ಯೆ ನೀಡುವ ಬಗ್ಗೆ ಸರ್ಕಾರ ಆದೇಶ ನೀಡಿದೆ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ 1ನೇ ಜನವರಿ 2026 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿ ಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 14.25 ರಿಂದ ಶೇಕಡ 15.75 ಕ್ಕೆ ಹೆಚ್ಚಿಸಿ ಮಂಜೂರು ಮಾಡಲಾಗಿದೆ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಈ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ ಎಂದು ಹೇಳಿದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುತ್ತದೆ. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿ ಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು, ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ 50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು. ಮತ್ತು 50 ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಒಂದು ವರ್ಷ ಚಿನ್ನ ಖರೀದಿಸ್ಬೇಡಿ ಎಂದು ಪ್ರಧಾನಿ ಮೋದಿ ಹೇಳಿದ್ಯಾಕೆ?

TAGGED:Bumper gift from Siddaramaiah government to state government employees!
Share This Article
Facebook Twitter Copy Link Print
Previous Article ಒಂದು ವರ್ಷ ಚಿನ್ನ ಖರೀದಿಸ್ಬೇಡಿ ಎಂದು ಪ್ರಧಾನಿ ಮೋದಿ ಹೇಳಿದ್ಯಾಕೆ?
Next Article ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್; ಹಿರಿಯ ಅಧಿಕಾರಿಗಳ ಹೆಸರು ಹೇಳಿದ ಆರೋಪಿ!

Popular Posts

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read
ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?