newsics.com
ನವದೆಹಲಿ: ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಹೆಸರು, ಫೋಟೋ ಹಾಗೂ ವಿಡಿಯೋ ತುಣುಕುಗಳನ್ನು ತಕ್ಷಣವೇ ಎಲ್ಲಾ ಸಾಮಾಜಿಕ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಅತ್ಯಾಚಾರ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವುದು ಆಕೆಯ ಘನತೆಯ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿತು.
ಅತ್ಯಾಚಾರ ಹಾಗೂ ಕೊಲೆ ಸಂತ್ರಸ್ತೆ ವೈದ್ಯೆಯ ದೇಹದ ಚಿತ್ರಗಳು ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಮೃತರ ಹೆಸರು, ಛಾಯಾಚಿತ್ರಗಳು ಮತ್ತು ವಿಡಿಯೋ ತುಣುಕುಗಳನ್ನು ತಕ್ಷಣವೇ ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕಬೇಕೆಂದು ನಾವು ನಿರ್ದೇಶಿಸುತ್ತೇವೆ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.
ಸಂತ್ರಸ್ತೆಯ ಗುರುತನ್ನು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸುವುದನ್ನು ಪ್ರಶ್ನಿಸಿ ವಕೀಲ ಕಿನ್ನೋರಿ ಘೋಷ್ ಮತ್ತು ಇತರರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!
22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್
ಪ್ರೀತಿ ನಿರಾಕರಿಸಿ ಪಿಯು ವಿದ್ಯಾರ್ಥಿನಿಗೆ ಮಾರಕಾಸ್ತ್ರಗಳಲ್ಲಿ ಇರಿದ ವಿದ್ಯಾರ್ಥಿ!