newsics.com/ನ್ಯೂಸಿಕ್ಸ್
ನವದೆಹಲಿ: ದೇಶದಲ್ಲಿ ಅಡುಗೆ ಎಣ್ಣೆಯ ಮೇಲಿನ ಅವಲಂಬನೆಯನ್ನು ತಗ್ಗಿಸಲು ಮತ್ತು ಆರೋಗ್ಯದ ದೃಷ್ಟಿಯಿಂದ ಅದರ ಬಳಕೆಯನ್ನು ಮಿತಿಗೊಳಿಸುವಂತೆ ಪ್ರಧಾನಿಯವರ ಈ ಹೇಳಿಕೆಯ ಬೆನ್ನಲ್ಲೇ ಅಡುಗೆ ಎಣ್ಣೆಯ ದರಗಳಲ್ಲಿ ಇಳಿಕೆ ಕಂಡುಬಂದಿದ್ದರೆ, ಇತ್ತ ಅಕ್ಕಿಯ ಬೆಲೆಯಲ್ಲಿ ಏರಿಕೆಯಾಗಿರುವುದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೇಶದ ಆರ್ಥಿಕತೆಯ ಒಳಿತಿನ ದೃಷ್ಟಿಯಿಂದ ಕೆಲ ಮನವಿಗಳನ್ನು ಮಾಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಗೃಹಿಣಿಯರಿಗೆ ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿ ಅನ್ನೋದು ಸಹ ಒಂದಾಗಿದೆ. ಆರೋಗ್ಯ ಹಾಗೂ ಆರ್ಥಿಕತೆಯ ಉದ್ದೇಶದಿಂದ ಈ ಕರೆ ನೀಡಿದ್ದಾರೆ.
https://youtube.com/shorts/wvfyhGYwVVw?si=koK0hviI-H0dDOsr
ಬಳಕೆ ತಗ್ಗಿಸಲು ಮನವಿ: ಅಡುಗೆ ಎಣ್ಣೆಯನ್ನು ಅತಿಯಾಗಿ ಬಳಸುವುದರಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಮೋದಿ ಕಳವಳ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿಯಬಹುದು ಎಂಬ ನಿರೀಕ್ಷೆಯಿಂದ ಬೆಲೆಗಳು ಇಳಿಕೆಯಾಗಿವೆ.
ಆಮದು ಮೇಲಿನ ಅವಲಂಬನೆ: ಭಾರತವು ಹೆಚ್ಚಿನ ಪ್ರಮಾಣದ ಅಡುಗೆ ಎಣ್ಣೆಯನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಸ್ಥಳೀಯವಾಗಿ ಬಳಕೆ ಕಡಿಮೆಯಾದರೆ ಆಮದು ವೆಚ್ಚ ತಗ್ಗಬಹುದು ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ.
ಒಂದೆಡೆ ಎಣ್ಣೆ ಬೆಲೆ ಇಳಿಕೆಯಾಗಿದ್ದರೆ, ಮತ್ತೊಂದೆಡೆ ದೈನಂದಿನ ಆಹಾರದ ಪ್ರಮುಖ ಭಾಗವಾದ ಅಕ್ಕಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.
ಪ್ರಧಾನಿಯವರ ಈ ಕರೆ ಕೇವಲ ಆರ್ಥಿಕ ದೃಷ್ಟಿಕೋನ ಮಾತ್ರವಲ್ಲದೆ, ದೇಶವಾಸಿಗಳ ಆರೋಗ್ಯವನ್ನು ಸುಧಾರಿಸುವ ಉದ್ದೇಶವನ್ನೂ ಹೊಂದಿದೆ. ಆದರೆ, ಅಕ್ಕಿಯ ಬೆಲೆ ಏರಿಕೆಯು ಮಾರುಕಟ್ಟೆಯಲ್ಲಿ ಹೊಸ ಸವಾಲನ್ನು ಸೃಷ್ಟಿಸಿದೆ.