Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > NEET-UG 2026 cancelled ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು
ಕರ್ನಾಟಕದೇಶಪ್ರಮುಖ

NEET-UG 2026 cancelled ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಯುಜಿ  ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಅಧಿಕೃತವಾಗಿ ರದ್ದುಗೊಳಿಸಿದೆ.

https://youtube.com/shorts/wvfyhGYwVVw?si=koK0hviI-H0dDOsr

ರಾಜಸ್ಥಾನದ ಕೆಲವು ಭಾಗಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದ ಬೆನ್ನಲ್ಲೇ NTA ಪರೀಕ್ಷೆಯನ್ನು ಮತ್ತೆ ನಡೆಸುವುದಾಗಿ ದೃಢಪಡಿಸಿದೆ. ಹೊಸ ನೋಂದಣಿ ಅಗತ್ಯವಿಲ್ಲ ಮತ್ತು ಶುಲ್ಕವನ್ನು ಕೂಡ ಕಟ್ಟುವ ಅಗತ್ಯವಿಲ್ಲ ಎಂದಿದೆ. ಸೋರಿಕೆ ಆರೋಪದ ಹಿನ್ನೆಲೆಯಲ್ಲಿ 2026 ರ ನೀಟ್ ಯುಜಿಯನ್ನು ರದ್ದುಗೊಳಿಸಲಾಗಿದೆ ಎಂದು ಎನ್‌ಟಿಎ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಮೇ 3 ರಂದು ನಡೆದ ಪರೀಕ್ಷೆಯ ಪಾರದರ್ಶಕತೆ ಬಗ್ಗೆ ಕೇಂದ್ರ ಸಂಸ್ಥೆಗಳಿಂದ ಬಂದ ಮಾಹಿತಿಗಳು ಕಳವಳಕಾರಿಯಾಗಿದ್ದು, ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಇದರಿಂದ ತೊಂದರೆಗೊಳಗಾಗಿರುವುದರಿಂದ, ಸರ್ಕಾರ ಈಗ ಮಧ್ಯಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಮರು ಸ್ಥಾಪಿಸಲು ಮತ್ತೊಮ್ಮೆ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ.

ಪರೀಕ್ಷೆ ರದ್ದಾಗಿರುವುದರಿಂದ ಆತಂಕಕ್ಕೊಳಗಾಗಿರುವ ವಿದ್ಯಾರ್ಥಿಗಳಿಗೆ ಎನ್‌ಟಿಎ ಕೆಲವು ಮುಖ್ಯ ಮಾಹಿತಿಗಳನ್ನು ನೀಡಿದೆ. ಮರುಪರೀಕ್ಷೆಗಾಗಿ ವಿದ್ಯಾರ್ಥಿಗಳು ಮತ್ತೆ ಯಾವುದೇ ಹೊಸ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಮೊದಲೇ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳ ವಿವರಗಳನ್ನು ಮುಂದಿನ ಪರೀಕ್ಷೆಗೆ ಬಳಸಿಕೊಳ್ಳಲಾಗುತ್ತದೆ.

ಅಲ್ಲದೆ ವಿದ್ಯಾರ್ಥಿಗಳು ಮರುಪರೀಕ್ಷೆಗಾಗಿ ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಈಗಾಗಲೇ ಪಾವತಿಸಿರುವ ಶುಲ್ಕವನ್ನು ಮರುಪಾವತಿ ಮಾಡುವ ಅಥವಾ ಹೊಂದಾಣಿಕೆ ಮಾಡುವ ಪ್ರಕ್ರಿಯೆ ನಡೆಯಲಿದೆ. ಹಳೆಯ ಪರೀಕ್ಷಾ ಕೇಂದ್ರಗಳೇ ಬಹುತೇಕವಾಗಿ ಮುಂದುವರಿಯಲಿದ್ದು, ಹೊಸ ಪ್ರವೇಶ ಪತ್ರಗಳನ್ನು ಪರೀಕ್ಷೆಗಿಂತ ಕೆಲವು ದಿನಗಳ ಮೊದಲು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

https://www.newsics.com/2026/05/12/himanta-biswa-sharma-takes-oath-as-assam-cm/

TAGGED:NEET exam scheduled for May 3rd cancelled
Share This Article
Facebook Twitter Copy Link Print
Previous Article Assam CM Oath ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ
Next Article Actress Mouni ನಟಿ ಮೌನಿ ವೈವಾಹಿಕ ಜೀವನದಲ್ಲಿ ಬಿರುಗಾಳಿ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?