Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಈ 8 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ
ಕರ್ನಾಟಕಪ್ರಮುಖ

ರಾಜ್ಯದ ಈ 8 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಐಎಂಡಿ (IMD) ವತಿಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮೇ 14 ರಿಂದ 16 ರವರೆಗೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆ (Hailstorm) ಸಾಧ್ಯತೆಯಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಮೇ 14-15ರಂದು ಮಳೆಯಾಗುತ್ತದೆ. ಇನ್ನು ಮೇ. 14 ದಾವಣಗೆರೆ, ವಿಜಯನಗರ, ಶಿವಮೊಗ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಂಜಿನ ಕಲ್ಲುಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನೈಋತ್ಯ ಮುಂಗಾರು (Southwest Monsoon) ಚುರುಕುಗೊಂಡಿದ್ದು, ಈ ವಾರಾಂತ್ಯಕ್ಕೆ ಅಂಡಮಾನ್ ಪ್ರವೇಶಿಸಲಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮಿಸುವ ಲಕ್ಷಣಗಳಿವೆ. ಪ್ರಸ್ತುತ ಉಂಟಾಗಿರುವ ‘ಸೈಕ್ಲೋನಿಕ್ ಸರ್ಕ್ಯುಲೇಷನ್’ ಮಳೆಯ ತೀವ್ರತೆಯನ್ನು ಹೆಚ್ಚಿಸಿದೆ.

ಗುಡುಗು-ಮಿಂಚಿನ ವೇಳೆ ಮನೆಯೊಳಗೆ ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ. ಮರ ಅಥವಾ ವಿದ್ಯುತ್ ಕಂಬಗಳ ಕೆಳಗೆ ಆಶ್ರಯ ಪಡೆಯಬೇಡಿ. ರೈತರು ಕಟಾವು ಮಾಡಿದ ಬೆಳೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಜಯಲಲಿತಾ ಮಾರ್ಗದರ್ಶಕ ಈಗ ವಿಜಯ್ ಆಪ್ತ ಸಲಹೆಗಾರ

TAGGED:Heavy rain with thunderstorms for the next 3 days in these 8 districts of the state
Share This Article
Facebook Twitter Copy Link Print
Previous Article ಜಯಲಲಿತಾ ಮಾರ್ಗದರ್ಶಕ ಈಗ ವಿಜಯ್ ಆಪ್ತ ಸಲಹೆಗಾರ
Next Article ಮತ್ತೆ ಸನಾತನ ಧರ್ಮದ ಕುರಿತು ಮಾತನಾಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?