newsics.com/ನ್ಯೂಸಿಕ್ಸ್
ಪುಣೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿ, ಸಿಬಿಐಗೆ ಹಸ್ತಾಂತರಿಸಿದ್ದಾರೆ.
ಬಂಧಿತ ಆರೋಪಿಯನ್ನು ಮನಿಷಾ ವಾಗ್ಮಾರೆ (46) ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಸಿಬಿಐ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ನಗರ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಅವರು ಈ ಕುರಿತು ಮಾತನಾಡಿ, ಬಿಬ್ವೆವಾಡಿಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನಾವು ಆಕೆಯನ್ನು ಪ್ರಶ್ನಿಸಿ ಹೆಚ್ಚಿನ ತನಿಖೆಗಾಗಿ ಸಿಬಿಐಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದರು.
ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಮೇ 3 ರಂದು ನಡೆಸಲಾಗಿದ್ದ ಪರೀಕ್ಷೆಯನ್ನು ರದ್ದು ಮಾಡಿ, ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಅಧಿಕೃತ ಆದೇಶದಲ್ಲಿ ತಿಳಿಸಿದೆ.
https://www.newsics.com/2026/05/13/actor-dilip-raj-cremated-according-to-lingayat-traditions/