Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಇನ್ಸ್ಟಾಗ್ರಾಂ ಫಾಲೋವರ್ಸ್: ಪ್ರಧಾನಿ ಮೋದಿ ಹಿಂದಿಕ್ಕಿದ ನಟಿ ಶ್ರದ್ಧಾ ಕಪೂರ್!
ದೇಶಪ್ರಮುಖಮನರಂಜನೆ

ಇನ್ಸ್ಟಾಗ್ರಾಂ ಫಾಲೋವರ್ಸ್: ಪ್ರಧಾನಿ ಮೋದಿ ಹಿಂದಿಕ್ಕಿದ ನಟಿ ಶ್ರದ್ಧಾ ಕಪೂರ್!

Share
1 Min Read
SHARE

newsics.com

ನಟಿ ಶ್ರದ್ಧಾ ಕಪೂರ್ ಅವರಿಗೆ ‘ಸ್ತ್ರೀ 2’ ಸಿನಿಮಾದಿಂದ ಸೂಪರ್ ಡೂಪರ್ ಸಕ್ಸಸ್ ಸಿಕ್ಕಿದೆ. ಇದರಿಂದಾಗಿ ಶ್ರದ್ಧಾ ಕಪೂರ್ ಜನಪ್ರಿಯತೆ ಹೆಚ್ಚಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇನ್ಸ್ಟಾಗ್ರಾಮ್ ಬಳಕೆಯಲ್ಲಿ ಶ್ರದ್ಧಾ ಕಪೂರ್ ಆ್ಯಕ್ಟಿವ್ ಆಗಿದ್ದಾರೆ. ಅವರನ್ನು ಬರೋಬ್ಬರಿ 91.6 ಮಿಲಿಯನ್ (9.16 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

ಅಚ್ಚರಿಯೆಂದರೆ, ಪ್ರಧಾನಿ ನರೇಂದ್ರ ಮೋದಿ ಅವರಿಗಿಂತಲೂ ಶ್ರದ್ಧಾ ಕಪೂರ್ ಅವರಿಗೇ ಹೆಚ್ಚು ಫಾಲೋವರ್ಸ್ ಇದ್ದಾರೆ!

ಪ್ರಧಾನಿ ನರೇಂದ್ರ ಮೋದಿ ಅವರನ್ನು 91.3 ಮಿಲಿಯನ್ (9.13 ಕೋಟಿ) ಜನರು ಇನ್ಸ್ಟಾಗ್ರಾಮ್ನಲ್ಲಿ ಫಾಲೋ ಮಾಡುತ್ತಿದ್ದಾರೆ. ಅವರನ್ನು ಹಿಂದಿಕ್ಕುವ ಮೂಲಕ ಶ್ರದ್ಧಾ ಕಪೂರ್ ಅವರು ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಎರಡನೇ ಸ್ಥಾನದಲ್ಲಿ ಪ್ರಿಯಾಂಕಾ ಚೋಪ್ರಾ ಹಾಗೂ ಮೊದಲ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದಾರೆ. ಪ್ರಿಯಾಂಕಾ ಚೋಪ್ರಾ ಅವರಿಗೆ 91.8 ಮಿಲಿಯನ್ ಮತ್ತು ವಿರಾಟ್ ಕೊಹ್ಲಿ ಅವರಿಗೆ 270 ಮಿಲಿಯನ್ ಫಾಲೋವರ್ಸ್ ಇದ್ದಾರೆ.

ಬಾಲಿವುಡ್‌ನ ಜನಪ್ರಿಯ ನಟಿ ಆಲಿಯಾ ಭಟ್ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 85.1 ಮಿಲಿಯನ್ ಫಾಲೋವರ್ಸ್ ಇದ್ದಾರೆ. ದೀಪಿಕಾ ಪಡುಕೋಣೆ ಅವರನ್ನು 79.8 ಮಿಲಿಯನ್ ಜನರು ಫಾಲೋ ಮಾಡುತ್ತಿದ್ದಾರೆ. ಇವರಿಬ್ಬರ ನಂತರದ ಸ್ಥಾನ ಶ್ರದ್ಧಾ ಕಪೂರ್ ಅವರಿಗೆ ಸಿಕ್ಕಿದೆ.

ಬಾಲಿವುಡ್ನಲ್ಲಿ ಬಹುಬೇಡಿಕೆಯ ನಟಿಯಾಗಿ ಶ್ರದ್ಧಾ ಕಪೂರ್ ಗುರುತಿಸಿಕೊಂಡಿದ್ದಾರೆ. ‘ಸ್ತ್ರೀ 2’ ಸಿನಿಮಾದ ಯಶಸ್ಸಿನಿಂದ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

ಆಗಸ್ಟ್ 15ರಂದು ‘ಸ್ತ್ರೀ 2’ ಸಿನಿಮಾ ಬಿಡುಗಡೆಯಾಗಿದ್ದು, ಹಾರರ್ ಕಥೆ ಹೊಂದಿರುವ ಸಿನಿಮಾ ಇದಾಗಿದೆ. 2018ರಲ್ಲಿ ‘ಸ್ತ್ರೀ’ ಬಿಡುಗಡೆ ಆಗಿತ್ತು. ಅದರ ಮುಂದುವರಿದ ಕಥೆ ‘ಸ್ತ್ರೀ 2’ ಸಿನಿಮಾದಲ್ಲಿದೆ.

ರಾಜ್ಕುಮಾರ್ ರಾವ್, ಅಭಿಷೇಕ್ ಬ್ಯಾನರ್ಜಿ, ತಮನ್ನಾ ಭಾಟಿಯಾ, ವರುಣ್ ಧವನ್, ಪಂಕಜ್ ತ್ರಿಪಾಠಿ ಮುಂತಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಅಮರ್ ಕೌಶಿಕ್ ಅವರು ನಿರ್ದೇಶನ ಮಾಡಿದ್ದಾರೆ.

ವಿಶ್ವ ಬಾಕ್ಸ್ ಆಫೀಸ್ನಲ್ಲಿ ಈಗಾಗಲೇ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಈ ಸಿನಿಮಾ ಮುನ್ನುಗ್ಗುತ್ತಿದೆ.

https://www.instagram.com/p/C-kveFrPY3B/?utm_source=ig_web_button_share_sheet

ನಿವೇದಿತಾ ಗೌಡ ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್

ಲಿಪ್ ಲಾಕ್ ಮಾಡುವಾಗ ಪ್ರಿಯತಮೆ ಬಾಯಿಗೇ ವಾಂತಿ‌ ಮಾಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ

TAGGED:Instagram Followers: Actress Shraddha Kapoor overtaken by Prime Minister Modi!
Share This Article
Facebook Twitter Copy Link Print
Previous Article ಯುವತಿಗೆ ಆನ್‌ಲೈನ್‌ನಲ್ಲಿ ಹಣ ಕಳುಹಿಸಿ ಲಕ್ಷ, ಲಕ್ಷ ಕಳೆದುಕೊಂಡ ಪಾಂಡವಪುರ ಅರ್ಚಕ
Next Article ತಂದೆಯ ವಿರುದ್ಧ ದೂರು ನೀಡಲು ಠಾಣೆಗೆ ಬಂದ 5 ವರ್ಷದ ಬಾಲಕ

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?