Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM Modi & Gold ಒಂದು ವರ್ಷ ಚಿನ್ನ ಖರೀದಿ ಬೇಡ ಮೋದಿ ಹೇಳಿಕೆಗೆ ಹೂಡಿಕೆ ತಜ್ಞರು ಹೇಳಿದ್ದೇನು?
ದೇಶಕರ್ನಾಟಕಪ್ರಮುಖ

PM Modi & Gold ಒಂದು ವರ್ಷ ಚಿನ್ನ ಖರೀದಿ ಬೇಡ ಮೋದಿ ಹೇಳಿಕೆಗೆ ಹೂಡಿಕೆ ತಜ್ಞರು ಹೇಳಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಅಮೆರಿಕಾ- ಇರಾನ್ ಯುದ್ಧದಿಂದ ಕಚ್ಚಾತೈಲ ಬೆಲೆ ಗಗನಕ್ಕೇರಿದೆ. ಇದರಿಂದ ರೂಪಾಯಿ ಮೌಲ್ಯ ಕೂಡ ಕುಸಿಯುತ್ತಿದೆ. ಈಗ ಪ್ರಧಾನಿ ಮೋದಿ ದೇಶದ ಜನರಿಗೆ ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆ ಮಾಡಿ ಎಂದು ಕರೆ ನೀಡಿದ್ದಾರೆ. ಜತೆಗೆ ಚಿನ್ನ ಖರೀದಿಯನ್ನ ಒಂದು ವರ್ಷ ಮುಂದೂಡಿ ಎಂದು ಜನರಿಗೆ ಕರೆ ನೀಡಿದ್ದಾರೆ.  ಇದರ  ಬೆನ್ನಲ್ಲೇ  ಆರ್ಥಿಕತೆಯ ಮೇಲೆ ಬೀರುವ ಪರಿಣಾಮವನ್ನು ಹೂಡಿಕೆ ತಜ್ಞರು ವಿಶ್ಲೇಷಿಸಿದ್ದಾರೆ.

https://youtube.com/shorts/KY0wlwc-Du0?si=-28u12qk1-aiTIHP

ನರೇಂದ್ರ ಮೋದಿ ಅವರು ಹೇಳಿರುವುದು ಸರಿ ಇದೆ. ಕಳೆದ ವರ್ಷದ ದೇಶದ ಆಮದು-ರಫ್ತು ಗಮನಿಸಿದರೆ ಭಾರತವು 23 ರಿಂದ 25 ಸಾವಿರ ಕೋಟಿ ರು. ಮೌಲ್ಯ(ಶೇ.30)ದ ಕಚ್ಚಾತೈಲ ಆಮದು ಮಾಡಿಕೊಂಡಿದೆ.

ಮೋದಿ ಅವರ ಹೇಳಿಕೆಯಿಂದ ಖಂಡಿತವಾಗಿಯೂ ಚಿನ್ನದ ದರ ಹೆಚ್ಚಳವಾಗುವುದಿಲ್ಲ. ಏಕೆಂದರೆ ಬಂಗಾರದ ಬೆಲೆ ನಿರ್ಧಾರವಾಗುವುದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ಡಾಲರ್‌ ಎದುರು ರುಪಾಯಿ ಬೆಲೆ ಕುಸಿದರೆ ಮಾತ್ರ. ಆದರೆ ಚಿನ್ನದ ಆಮದು ಇದೇ ರೀತಿ ಮುಂದುವರಿದರೆ ಖಂಡಿತವಾಗಿಯೂ ದರ ಅಧಿಕವಾಗಲಿದೆ.

ಇದರಲ್ಲಿ ಯಾವುದೇ ಸಂಶಯ ಬೇಡ. ಕಳೆದೆರಡು ವರ್ಷದಲ್ಲಿ ಚಿನ್ನದ ಬೆಲೆ ಶೇ.150 ರಿಂದ 200 ರವರೆಗೂ ಅಧಿಕವಾಗಿದೆ. ಖರೀದಿ ಕಡಿಮೆಯಾದರೆ ಮಾತ್ರ ಚಿನ್ನದ ದರದಲ್ಲಿ ಇಳಿಕೆಯಾಗಲು ಸಾಧ್ಯ. ಆದ್ದರಿಂದಲೇ ಚಿನ್ನ ಖರೀದಿ ಮುಂದೂಡುವಂತೆ ಪ್ರಧಾನಿ ಕರೆ ನೀಡಿದ್ದಾರೆ.

ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂಬ ಮುನ್ಸೂಚನೆ ದೊರೆತಿದ್ದರಿಂದಲೇ ಕೇಂದ್ರ ಸರ್ಕಾರ ಚಿನ್ನದ ಶೇಖರಣೆಗೆ ಆದ್ಯತೆ ನೀಡಿತು. ನಮ್ಮಲ್ಲಿ ಪ್ರಸ್ತುತ 690 ಬಿಲಿಯನ್‌ ಡಾಲರ್‌ ವಿದೇಶಿ ವಿನಿಮಯವಿದೆ.

ಒಂದು ಡಾಲರ್‌ಗೆ 95 ರು. ಮೌಲ್ಯವಿದೆ. ನಾವು ಆಮದು ಪ್ರಮಾಣ ಹೆಚ್ಚಿಸುತ್ತಾ ಹೋದರೆ ರುಪಾಯಿ ಮೌಲ್ಯ ಡಾಲರ್‌ ಎದುರು 105 ರಿಂದ 110 ರು. ಆಗುತ್ತದೆ. ಈ ಕುಸಿತ ವಿದೇಶಿ ವಿನಿಮಯದ ಮೇಲೆ ಭಾರೀ ಹೊಡೆತ ನೀಡಲಿದ್ದು, ಔಷಧಿ ಸೇರಿ ಅಗತ್ಯ ವಸ್ತುಗಳಿಗೂ ಅಧಿಕ ಬೆಲೆ ತೆತ್ತು ಆಮದು ಮಾಡಿಕೊಳ್ಳಬೇಕಾಗುತ್ತದೆ. ಆದ್ದರಿಂದಲೇ ಕೇಂದ್ರ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ ಎಂದು ಹೂಡಿಕೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

https://www.newsics.com/2026/05/14/following-amul-mother-dairy-increases-milk-price-by-rs-2-from-today/

TAGGED:gold-will-become-even-more-expensive-if-purchases-are-not-reduced
Share This Article
Facebook Twitter Copy Link Print
Previous Article Mother Dairy milk price hike ಅಮುಲ್ ಬೆನ್ನಲ್ಲೇ ಇಂದಿನಿಂದ ಮದರ್ ಡೈರಿ ಲೀ.ಹಾಲಿನ ದರ 2 ರೂ.ಹೆಚ್ಚಳ
Next Article ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿದೆ, ಕೇಸರಿ ಶಾಲು ಧರಿಸಲು ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Popular Posts

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?