newsics.com/ನ್ಯೂಸಿಕ್ಸ್
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
https://youtube.com/shorts/vd_Fn8drod4?si=CvPPZAJu5QmGONhu
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಮತ್ತು ಗುಡುಗು ಮಿಂಚಿನ ಸಂದರ್ಭದಲ್ಲಿ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು ಎಂದು ಸೂಚಿಸಲಾಗಿದೆ.