newsics.com/ನ್ಯೂಸಿಕ್ಸ್
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಶಂಷಾಬಾದ್) ಬಾಂಬ್ ಬೆದರಿಕೆ ಇಮೇಲ್ ಬಂದಿದೆ.
https://youtube.com/shorts/vd_Fn8drod4?si=CvPPZAJu5QmGONhu
ಫ್ರಾಂಕ್‌ಫರ್ಟ್‌ನಿಂದ ಹೈದರಾಬಾದ್‌ಗೆ ಬರುತ್ತಿದ್ದ ಲುಫ್ತಾನ್ಸಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಇಮೇಲ್ ಮೂಲಕ ಎಚ್ಚರಿಕೆ ನೀಡಿದ್ದರು. ವಿಮಾನವು ಶಂಷಾಬಾದ್ ತಲುಪುವ ಮೊದಲೇ ಅದನ್ನು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು.
ಮಾಹಿತಿ ಸಿಗುತ್ತಿದ್ದಂತೆಯೇ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ಕಾರ್ಯಪ್ರವೃತ್ತರಾದರು.ವಿಮಾನವು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯುತ್ತಿದ್ದಂತೆಯೇ ಅದನ್ನು ತಕ್ಷಣವೇ ಐಸೋಲೇಶನ್ ಬೇಗೆ ಸ್ಥಳಾಂತರಿಸಲಾಯಿತು.
ಬಾಂಬ್ ಸ್ಕ್ವಾಡ್ ಮತ್ತು ಭದ್ರತಾ ಸಿಬ್ಬಂದಿ ವಿಮಾನವನ್ನು ಕೂಲಂಕಷವಾಗಿ ತಪಾಸಣೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬೆದರಿಕೆ ಇಮೇಲ್ ಎಲ್ಲಿಂದ ಬಂದಿದೆ ಎಂಬುದರ ಕುರಿತು ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಮೇಲ್‌ನ ಮೂಲ ಮತ್ತು ಐಪಿ ವಿಳಾಸವನ್ನು ಪತ್ತೆಹಚ್ಚುವ ಕೆಲಸ ನಡೆಯುತ್ತಿದೆ.