newsics.com/ನ್ಯೂಸಿಕ್ಸ್
ಬಂಗಾಳ ಉಪಸಾಗರದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಾದ್ಯಂತ ಮುಂದಿನ 4-5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ರಾಜ್ಯದೆಲ್ಲೆಡೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಮೇ 17ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ.ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ‘ಹೈ ಅಲರ್ಟ್’ ಘೋಷಿಸಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಹಠಾತ್ ಜಲಪಾತಗಳು ಮತ್ತು ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗಲಿದೆ. ಇಂದು ಮತ್ತು ನಾಳೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ (Hailstorm) ಮುನ್ಸೂಚನೆ ಇರುವುದರಿಂದ ಈ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
https://www.newsics.com/2026/05/16/gold-prices-plunge-silver-drops-by-%e2%82%b910000-per-kg/