Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀಟ್’ ಮಾದರಿಯಂತೆ ಕೆಸಿಇಟಿ ಪರೀಕ್ಷೆಯಲ್ಲೂ ಹಗರಣ?
ಕರ್ನಾಟಕಪ್ರಮುಖ

ನೀಟ್’ ಮಾದರಿಯಂತೆ ಕೆಸಿಇಟಿ ಪರೀಕ್ಷೆಯಲ್ಲೂ ಹಗರಣ?

Share
2 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ನಡೆಸಿದ ಕೃಷಿ ವಿಜ್ಞಾನ ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವ ಗಂಭೀರ ಆರೋಪ ಕೇಳಿಬಂದಿದ್ದು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಮಟ್ಟದ ‘ನೀಟ್’  ಪರೀಕ್ಷೆಯ ಹಗರಣದ ಮಾದರಿಯಲ್ಲೇ ರಾಜ್ಯದ ಕೆಸಿಇಟಿ (KCET) ಪ್ರಾಯೋಗಿಕ ಪರೀಕ್ಷೆಯಲ್ಲೂ ಬೃಹತ್ ಗೋಲ್‌ಮಾಲ್ ನಡೆದಿದೆ ಎಂದು ಆರೋಪಿಸಲಾಗಿದ್ದು, ಸಮಗ್ರ ತನಿಖೆಗೆ ಆಗ್ರಹಿಸಲಾಗಿದೆ.

ಏನಿದು ಅಕ್ರಮ?

ಕೃಷಿ ವಿಜ್ಞಾನ ಕೋರ್ಸ್‌ಗಳ ಆಯ್ಕೆಗಾಗಿ ಮೇ 10ರಂದು ರಾಜ್ಯಾದ್ಯಂತ ಒಟ್ಟು 17 ಕೇಂದ್ರಗಳಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಪಾಲಕರು ಮತ್ತು ವಿದ್ಯಾರ್ಥಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪರೀಕ್ಷಾ ಕೇಂದ್ರವೊಂದರಲ್ಲೇ ಬರೋಬ್ಬರಿ 74 ವಿದ್ಯಾರ್ಥಿಗಳು 200ಕ್ಕೆ 200 ಪೂರ್ಣ ಅಂಕಗಳನ್ನು ಪಡೆದುಕೊಂಡಿದ್ದಾರೆ. ಆದರೆ, ರಾಜ್ಯದ ಇನ್ನುಳಿದ 16 ಪರೀಕ್ಷಾ ಕೇಂದ್ರಗಳನ್ನು ಒಟ್ಟಾಗಿ ಸೇರಿಸಿದರೂ ಕೇವಲ 24 ವಿದ್ಯಾರ್ಥಿಗಳು ಮಾತ್ರ ಪೂರ್ಣ ಅಂಕ ಗಳಿಸಲು ಸಾಧ್ಯವಾಗಿದೆ. ಒಂದೇ ಕೇಂದ್ರದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ನೂರಕ್ಕೆ ನೂರು ಅಂಕ ಬಂದಿರುವುದು ಪರೀಕ್ಷಾ ಅಕ್ರಮ ನಡೆದಿರುವುದಕ್ಕೆ ಸ್ಪಷ್ಟ ಸಾಕ್ಷಿ ಎಂದು ಪೋಷಕರು ದೂರಿದ್ದಾರೆ.

ಪರೀಕ್ಷಾ ವಿಧಾನ ಮತ್ತು ಮೀಸಲಾತಿ

ರಾಜ್ಯದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಕೃಷಿ ವಿಜ್ಞಾನ ಕೋರ್ಸ್‌ಗಳಲ್ಲಿ ಶೇಕಡಾ 50 ರಷ್ಟು ಸೀಟುಗಳನ್ನು ಮೀಸಲಾಗಿಡಲಾಗಿದೆ. ಈ ವಿಶೇಷ ಸೀಟುಗಳ ಹಂಚಿಕೆಗಾಗಿಯೇ ಈ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. 17 ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ನಡೆಯುವ ಈ ಪರೀಕ್ಷೆಯಲ್ಲಿ ತೋಟಗಾರಿಕೆ, ಕೃಷಿ, ಹೈನುಗಾರಿಕೆಗೆ ಸಂಬಂಧಿಸಿದ ವಿವಿಧ ಬೀಜಗಳು, ಗಿಡಗಳು ಹಾಗೂ ಕೃಷಿ ಯಂತ್ರೋಪಕರಣಗಳನ್ನು ಇಡಲಾಗಿರುತ್ತದೆ. ಅಭ್ಯರ್ಥಿಗಳು ಅವುಗಳನ್ನು ಭೌತಿಕವಾಗಿ ನೋಡಿ ಗುರುತಿಸಿ ಉತ್ತರ ಬರೆಯಬೇಕು. ಪ್ರತಿಯೊಂದು ಕೇಂದ್ರಕ್ಕೂ ಪ್ರತ್ಯೇಕ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತದೆ. ಇಂತಹ ಪರೀಕ್ಷೆಯಲ್ಲಿ ಹಿರಿಯೂರು ಕೇಂದ್ರದಲ್ಲಿ ಮಾತ್ರ ಇಷ್ಟೊಂದು ಗರಿಷ್ಠ ಅಂಕಗಳು ಬಂದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಒಂದೆಡೆ ಅಂಕಗಳ ಹಗರಣ ನಡೆದಿದ್ದರೆ, ಮತ್ತೊಂದೆಡೆ ಪರೀಕ್ಷೆ ಬರೆಯಲು ಅರ್ಹರಿದ್ದ ಹಲವು ವಿದ್ಯಾರ್ಥಿಗಳಿಗೆ ಕೆಸಿಇಟಿ ಹಾಲ್ ಟಿಕೆಟ್ ನೀಡದೆ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪವೂ ಕೇಳಿಬಂದಿದೆ. ಕೆಸಿಇಟಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಇದರಿಂದಾಗಿ ಹಗಲಿರುಳು ಕಷ್ಟಪಟ್ಟು ಓದಿದ ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳಿಗೆ ಘೋರ ಅನ್ಯಾಯವಾಗಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ನಡೆದಿರುವ ಪರೀಕ್ಷೆಯನ್ನು ತಕ್ಷಣವೇ ರದ್ದುಗೊಳಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಕೂಡಲೇ ಮರುಪರೀಕ್ಷೆ ನಡೆಸಬೇಕೆಂದು ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿ ಸಮೂಹ ತೀವ್ರ ಒತ್ತಾಯಿಸಿದೆ.

ಮನೆಯಲ್ಲಿ ಪಾಸಿಟಿವ್ ಎನರ್ಜಿ ಹೆಚ್ಚಿಸಲು ಈ ರೀತಿ ಮಾಡಿ

TAGGED:A scam in the KCET exam like NEET? 74 students scored 200 out of 200!
Share This Article
Facebook Twitter Copy Link Print
Previous Article ಮನೆಯಲ್ಲಿ ಪಾಸಿಟಿವ್ ಎನರ್ಜಿ ಹೆಚ್ಚಿಸಲು ಈ ರೀತಿ ಮಾಡಿ
Next Article ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಎನ್‌ಟಿಎ ತಜ್ಞೆ ಮನೀಷಾ ಮಂಢಾರೆ ಸಿಬಿಐ ಬಲೆಗೆ!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?