newsics.com/ನ್ಯೂಸಿಕ್ಸ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದು, ಜೈಲಿನಿಂದ ಹೊರಬರಲು ಹರಸಾಹಸಪಡುತ್ತಿದ್ದಾರೆ..ಇತ್ತೀಚೆಗೆ ಜಾಮಿನು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಜಾಮೀನು ಕೋರಿ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಸದ್ಯಕ್ಕೆ ಜಾಮೀನು ನೀಡಲು ನಿರಾಕರಿಸಿದ್ದು, ಒಂದು ವರ್ಷದೊಳಗೆ ಪ್ರಕರಣದ ವಿಚಾರಣೆಯನ್ನು ಕಡ್ಡಾಯವಾಗಿ ಮತ್ತು ತೀವ್ರಗತಿಯಲ್ಲಿ ಮುಗಿಸುವಂತೆ ಕೆಳ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಮುಂದಿನ ಒಂದು ವರ್ಷದಲ್ಲಿ 60 ಪ್ರಮುಖ ಸಾಕ್ಷಿಗಳನ್ನು ದಿನನಿತ್ಯದ ಆಧಾರದ ಮೇಲೆ ವಿಚಾರಣೆ ನಡೆಸಬೇಕು ಎಂದು ಕೋರ್ಟ್ ತಿಳಿಸಿದೆ. ವಿಚಾರಣೆಯಲ್ಲಿ ಗಣನೀಯ ಪ್ರಗತಿ ಇಲ್ಲದಿದ್ದರೆ, ಆ ಬಳಿಕವಷ್ಟೇ ನಟ ದರ್ಶನ್ ಜಾಮೀನಿಗಾಗಿ ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಒಂದೆಡೆ ವಕೀಲರ ಜೊತೆ ಚರ್ಚಿಸಿ ಕಾನೂನು ಹೋರಾಟ ತೀವ್ರಗೊಳಿಸಿದ್ದರೆ, ಇತ್ತ ದೇವಸ್ಥಾನ ದರ್ಶನ ಮಾಡಿ ಪತಿ ಬಿಡುಗಡೆಗೆ ಪ್ರಾರ್ಥಿಸಿದ್ದರು. ಆದರೂ ಸುಪ್ರೀಂ ಕೋರ್ಟ್ ಬೇಲ್ ನಿರಾಕರಿಸಿರುವುದು ಪತ್ನಿ ವಿಜಯಲಕ್ಷ್ಮಿಗೆ ತೀವ್ರ ಹಿನ್ನಡೆ ನೀಡಿದೆ.
ಈ ಎಲ್ಲ ಬೆಳವಣಿಗೆಗಳಿಂದ ತೀವ್ರ ಬೇಸರಗೊಂಡಿರುವ ವಿಜಯಲಕ್ಷ್ಮಿ ಅವರು, ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅವರ ಬ್ಲ್ಯಾಕ್ ಅಂಡ್ ವೈಟ್ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅದಕ್ಕೆ ದರ್ಶನ್ ಅಭಿನಯದ ‘ಲಂಕೇಶ್ ಪತ್ರಿಕೆ’ ಚಿತ್ರದ “ಆ ಮೋಡದಿಂದ…” ಹಾಡನ್ನು ಹಿನ್ನೆಲೆಯಾಗಿ ಬಳಸಿ, ಮುರಿದ ಹೃದಯದ (Broken Heart 💔) ಸಿಂಬಲ್ ಹಾಕಿದ್ದಾರೆ. ಈ ಪೋಸ್ಟ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಡಿ ಬಾಸ್ ಅಭಿಮಾನಿಗಳು ಕೂಡ ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
https://www.instagram.com/stories/viji.darshan/3899122658802129590?utm_source=ig_story_item_share&igsh=Z3k1aGR2Yzk2bGcw