Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dubare tragedy ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗ, ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!
ಕರ್ನಾಟಕದೇಶಪ್ರಮುಖ

Dubare tragedy ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗ, ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!

Share
2 Min Read
SHARE

newsics.com/ನ್ಯೂಸಿಕ್ಸ್

ಕೊಡಗು (ಮೇ 18): ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಭೀಕರ ದುರ್ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಎರಡು ಆನೆಗಳ ನಡುವಿನ ಕಾಳಗಕ್ಕೆ ಬಲಿಯಾದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (ಜಿನ್ನು) ಅವರ ಸಾವು ಈಗ ಅರಣ್ಯ ಇಲಾಖೆಯ ಹತ್ತಾರು ಲೋಪದೋಷಗಳನ್ನು ಎತ್ತಿ ತೋರಿಸುತ್ತಿದೆ. ಈ ನಡುವೆ, ಪತ್ನಿಯನ್ನು ಕಳೆದುಕೊಂಡ ನೋವಿನಲ್ಲೂ ಪತಿ ಜೋಯೆಲ್ ಅವರು ಪತ್ನಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ದುರಂತದ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ ಪತಿ ಜೋಯೆಲ್, ‘ನನ್ನ ಪತ್ನಿಯನ್ನು ಉಳಿಸಿಕೊಳ್ಳಲು ನನಗೆ ಸಾಧ್ಯವಾಗಲಿಲ್ಲ. ಆನೆಯ ತುಳಿತಕ್ಕೆ ಆಕೆಯ ದೇಹ ನಜ್ಜುಗುಜ್ಜಾಗಿದೆ. ಹೀಗಾಗಿ ಎಲ್ಲ ಅಂಗಾಂಗಗಳನ್ನು ದಾನ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಕನಿಷ್ಠ ಆಕೆಯ ಕಣ್ಣುಗಳನ್ನಾದರೂ ದಾನ ಮಾಡುತ್ತೇನೆ. ಆಕೆ ಬೇರೆಯವರ ಕಣ್ಣಿನ ಮೂಲಕ ಈ ಪ್ರಪಂಚವನ್ನು ನೋಡುತ್ತಾ ಬದುಕಿರಲಿ’ ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ದುಬಾರೆಯಲ್ಲಿ ಪ್ರವಾಸಿಗರಿಗೆ ಕನಿಷ್ಠ ಸುರಕ್ಷತೆಯೂ ಇಲ್ಲ ಎಂದು ಜೋಯೆಲ್ ದೂರಿದ್ದಾರೆ. ‘ನನ್ನ ಪತ್ನಿ ಆನೆಗಳ ಕಾಳಗದ ನಡುವೆ ಸಿಲುಕಿ ಕೆಳಗೆ ಬಿದ್ದಾಗ ರಕ್ಷಿಸಲು ಯಾರೂ ಬರಲಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಕೂಡ ಸಿಗಲಿಲ್ಲ. ಇಲಾಖೆಯ ಬೇಜವಾಬ್ದಾರಿಯೇ ನನ್ನ ಪತ್ನಿಯ ಸಾವಿಗೆ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾವುತರು ಎಷ್ಟೇ ಪ್ರಯತ್ನಿಸಿದರೂ ಕಂಜನ್ ಆನೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಮೃತ ಮಹಿಳೆಯ ಕುಟುಂಬಕ್ಕೆ ಸರ್ಕಾರದಿಂದ 20 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಡಿಎಫ್ಒ ಅಭಿಷೇಕ್ ತಿಳಿಸಿದ್ದಾರೆ.

ದುರಂತಕ್ಕೆ ಮಾವುತರ ನಿರ್ಲಕ್ಷ್ಯವೇ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಂಜನ್ ಆನೆಯ ಅಧಿಕೃತ ಮಾವುತ ವಿಜಯ ಎಂಬುವವರು ಘಟನೆಯ ವೇಳೆ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಅವರ ಬದಲಿಗೆ ಆನೆಗಳನ್ನು ನಿಭಾಯಿಸಲು ಅನುಭವವಿಲ್ಲದ ‘ಹೊರಗುತ್ತಿಗೆ ನೌಕರ’ ಆನೆಯನ್ನು ಮುನ್ನಡೆಸುತ್ತಿದ್ದನು ಎಂಬ ಮಾಹಿತಿ ಹೊರಬಿದ್ದಿದೆ.

ಸಾಮಾನ್ಯವಾಗಿ ಆನೆಗಳು ತಮ್ಮ ಮಾವುತ ಮತ್ತು ಕವಾಡಿಗರ ಮಾತನ್ನು ಮಾತ್ರ ಕೇಳುತ್ತವೆ. ಆದರೆ, ಅಪರಿಚಿತ ವ್ಯಕ್ತಿ ಆನೆಯನ್ನು ನಡೆಸುತ್ತಿದ್ದರಿಂದ, ಆನೆ ರೊಚ್ಚಿಗೆದ್ದಾಗ ಅದನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ಇತರ ಮಾವುತರು ವಿಶ್ಲೇಷಿಸುತ್ತಿದ್ದಾರೆ.

TAGGED:deceased's eyes donated!Woman dies in elephant fight at Dubare livestock camp; Rs 20 lakh compensation
Share This Article
Facebook Twitter Copy Link Print
Previous Article 33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ; ಸಾವಿಗೆ ಕಾರಣ ಏನು?
Next Article Petrol, diesel price hike ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್: ವಾರದಲ್ಲಿ 2ನೇ ಬಾರಿ ದರ ಹೆಚ್ಚಳ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

1 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?