Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > US -IRAN ಯುದ್ಧದ ಬಗ್ಗೆ ಟ್ರಂಪ್​ ಮಹತ್ವದ ಹೇಳಿಕೆ! ಇರಾನ್​ ಅಮೆರಿಕ ಯುದ್ಧಕ್ಕೆ ಅಂತ್ಯ ಕಾಣುತ್ತಾ?
ದೇಶಪ್ರಮುಖವಿದೇಶ

US -IRAN ಯುದ್ಧದ ಬಗ್ಗೆ ಟ್ರಂಪ್​ ಮಹತ್ವದ ಹೇಳಿಕೆ! ಇರಾನ್​ ಅಮೆರಿಕ ಯುದ್ಧಕ್ಕೆ ಅಂತ್ಯ ಕಾಣುತ್ತಾ?

Share
2 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಚದುರಂಗದಾಟ ಹೊಸ ತಿರುವು ಪಡೆದುಕೊಂಡಿದೆ.ಇರಾನ್ ಮತ್ತು ಅಮೆರಿಕ ನಡುವೆ ಮತ್ತೆ ಯುದ್ಧವಾಗಬಹುದು, ಯಾವಾಗ ಬೇಕಿದ್ದರೂ ಎರಡೂ ದೇಶಗಳು ಸ್ಫೋಟಿಸಬಹುದು ಎಂಬ ಭಯ ತುಂಬಾ ಹೆಚ್ಚಿತ್ತು.

ಆದರೆ ಈಗ ಪರಿಸ್ಥಿತಿಯಲ್ಲಿ ಸ್ವಲ್ಪ ಶಾಂತಿ ಕಾಣಿಸುತ್ತಿದೆ. ಅಮೆರಿಕ ತನ್ನ ಮುಂದಿನ ಸೈನಿಕ ದಾಳಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವ ಬಗ್ಗೆ ಯೋಜನೆ ರೂಪಿಸಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ ತೈಲ ಮಾರುಕಟ್ಟೆಗೆ ಸ್ವಲ್ಪ ಧೈರ್ಯ ಸಿಕ್ಕಂತಾಗಿದೆ.

ಈ ಮಧ್ಯೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಇರಾನ್ ಮೇಲೆ ಅಮೆರಿಕ ನಡೆಸಬೇಕಿದ್ದ ದೊಡ್ಡ ದಾಳಿಯನ್ನು ತಾವು ಮುಂದೂಡಿದ್ದೇವೆ ಎಂದು ಅವರು ಹೇಳಿದ್ದಾರೆ. ಕತಾರ್, ಸೌದಿ ಅರೇಬಿಯಾ ಮತ್ತು ಯುಎಇ ದೇಶಗಳ ವಿನಂತಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಈಗ ಇರಾನ್ ಜೊತೆ ಗಂಭೀರ ಮಟ್ಟದ ಮಾತುಕತೆಗಳು ನಡೆಯುತ್ತಿವೆ.

 

ಟ್ರಂಪ್ ಹೇಳುವಂತೆ, ಕತಾರ್‌ನ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ, ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ತಮಗೆ ಫೋನ್ ಮೂಲಕ ಸಂಪರ್ಕಿಸಿದ್ದರು. ಅವರು ಮೂವರೂ ಕೂಡ ಇರಾನ್ ಮೇಲೆ ಯೋಜಿಸಿದ ಮಿಲಿಟರಿ ದಾಳಿಯನ್ನು ಕನಿಷ್ಠ ಒಂದು ದಿನ ಮುಂದೂಡಬೇಕೆಂದು, ಶಾಂತಿಗೆ ಇನ್ನೂ ಒಂದು ಅವಕಾಶ ಕೊಡಬೇಕೆಂದು ಟ್ರಂಪ್ ಅವರನ್ನು ಮನವೊಲಿಸಿದ್ದರು. ಅವರ ಮೇಲಿನ ಗೌರವದಿಂದಲೇ ದಾಳಿ ತಡೆದು, ಮಿಲಿಟರಿಗೆ ‘ಇನ್ನೂ ಕಾಯಿರಿ’ ಎಂಬ ಆದೇಶ ನೀಡಿರುವುದಾಗಿ ಟ್ರಂಪ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಮಾತುಕತೆ ಎಂದರೆ ಶರಣಾಗತಿ ಅಲ್ಲ, ಅದು ನಮ್ಮ ಆತ್ಮಸಮ್ಮಾನವನ್ನು ಕಳೆದುಕೊಳ್ಳುವ ಪ್ರಕ್ರಿಯೆಯೂ ಅಲ್ಲ ಎಂದು ಅವರು ಹೇಳಿದ್ದಾರೆ. ಟೆಹ್ರಾನ್ ತನ್ನ ಘನತೆ, ಶಕ್ತಿ ಮತ್ತು ರಾಷ್ಟ್ರದ ಹಕ್ಕುಗಳನ್ನು ಕಾಪಾಡಿ ಕೊಳ್ಳಲು, ಅವುಗಳನ್ನು ಬಿಟ್ಟುಕೊಡದೆ ಮಾತನಾಡಲು ಸಿದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಗ ನಡೆಯುತ್ತಿರುವ ಮಾತುಕತೆಗಳು ಯಶಸ್ವಿಯಾಗುತ್ತವೆಯೇ, ಅಥವಾ ಮತ್ತೆ ಯುದ್ಧದ ಬೆಂಕಿ ಹೊತ್ತಿಕೊಳ್ಳುತ್ತದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

Darshan-Vijaylakshmi 23ವರ್ಷದ ದಾಂಪತ್ಯಕ್ಕೆ 1ವರ್ಷದ ಅಜ್ಞಾತವಾಸ : ಮದುವೆ ದಿನ ವಿಜಯಲಕ್ಷ್ಮಿ ಭಾವುಕ ಪೋಸ್ಟ್!

TAGGED:Trump's important statement about war! Will the Iran-US war end?
Share This Article
Facebook Twitter Copy Link Print
Previous Article Darshan-Vijaylakshmi 23ವರ್ಷದ ದಾಂಪತ್ಯಕ್ಕೆ 1ವರ್ಷದ ಅಜ್ಞಾತವಾಸ : ಮದುವೆ ದಿನ ವಿಜಯಲಕ್ಷ್ಮಿ ಭಾವುಕ ಪೋಸ್ಟ್!
Next Article Srividya Raj ನೆಮ್ಮದಿಯಾಗಿರೋದಕ್ಕೆ ದೇವರು ಬಿಡೋದಿಲ್ಲ : ಶ್ರೀವಿದ್ಯಾ ಭಾವುಕ ಪೋಸ್ಟ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?