Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ, ಪುತ್ರನಿಗೆ ಅನುಮತಿ
ಕರ್ನಾಟಕಪ್ರಮುಖಮನರಂಜನೆ

ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ, ಪುತ್ರನಿಗೆ ಅನುಮತಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಜೈಲಾಧಿಕಾರಿಗಳಿಂದ ಕೊಂಚ ನಿರಾಳತೆ ಸಿಕ್ಕಿದೆ.

ಜೈಲಿನ ನಿಯಮಾವಳಿಗಳ ಪ್ರಕಾರ ತಮ್ಮ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅವರನ್ನು ಮುಖಾಮುಖಿಯಾಗಿ ಭೇಟಿಯಾಗಲು ಜೈಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಜೈಲು ಸೇರಿರುವ ನಟ ದರ್ಶನ್, ಕಾರಾಗೃಹದ ನಿಯಮಾವಳಿಗಳ ಅನ್ವಯ ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಲು ಅನುಮತಿ ಕೋರಿ ಜೈಲಾಧಿಕಾರಿಗಳಿಗೆ ಲಿಖಿತ ಪತ್ರವೊಂದನ್ನು ಬರೆದಿದ್ದರು. ಜೈಲಿಗೆ ಬರುವ ಪತ್ನಿ ಮತ್ತು ಮಗನೊಂದಿಗೆ ನಿಯಮಿತವಾಗಿ ಮಾತನಾಡಲು ಅವಕಾಶ ನೀಡಬೇಕು ಎಂದು ಅವರು ಈ ಪತ್ರದ ಮೂಲಕ ವಿನಂತಿಸಿದ್ದರು.

ಜೈಲು ವಾಸದಿಂದಾಗಿ ಎದುರಿಸುತ್ತಿರುವ ಮಾನಸಿಕ ಸ್ಥಿತಿ, ಕುಟುಂಬದ ಜವಾಬ್ದಾರಿಗಳು ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಜಾಮೀನು ಪ್ರಕ್ರಿಯೆಯ ಕಾನೂನು ಹೋರಾಟದ ಕುರಿತು ಪತ್ನಿಯೊಂದಿಗೆ ಸುದೀರ್ಘವಾಗಿ ಚರ್ಚಿಸಬೇಕಿದೆ. ಹೀಗಾಗಿ ಒಳಸಂದರ್ಶನದ ಅಗತ್ಯವಿದೆ,” ಎಂದು ದರ್ಶನ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದರು ಎನ್ನಲಾಗಿದೆ.ಇದಕ್ಕೂ ಮುನ್ನ ದರ್ಶನ್ ಪರ ವಕೀಲರ ತಂಡವೂ ಸಹ ಕುಟುಂಬದವರೊಂದಿಗೆ ಮುಖಾಮುಖಿ ಸಂದರ್ಶನಕ್ಕೆ ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಪ್ರತ್ಯೇಕ ಅರ್ಜಿ ಸಲ್ಲಿಸಿತ್ತು.

ವಿಶೇಷವೆಂದರೆ, ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ ಮದುವೆ ವಾರ್ಷಿಕೋತ್ಸವದ ಸಂದರ್ಭದಲ್ಲೇ ಈ ವಿಶೇಷ ಭೇಟಿಗೆ ಮನವಿ ಸಲ್ಲಿಕೆಯಾಗಿತ್ತು. ಜೈಲಿನ ಕತ್ತಲ ಕೋಣೆಯಲ್ಲಿ ಕಂಗೆಟ್ಟಿರುವ ನಟನಿಗೆ, ಮದುವೆ ವಾರ್ಷಿಕೋತ್ಸವದ ದಿನದಂದೇ ಹೆಂಡತಿ ಮತ್ತು ಮಗನ ಮುಖಾಮುಖಿ ಭೇಟಿ ಕೊಂಚ ಭಾವನಾತ್ಮಕ ನಿರಾಳತೆ ತಂದಿದೆ ಎಂದು ಹೇಳಲಾಗುತ್ತಿದೆ.

Srividya Raj ನೆಮ್ಮದಿಯಾಗಿರೋದಕ್ಕೆ ದೇವರು ಬಿಡೋದಿಲ್ಲ : ಶ್ರೀವಿದ್ಯಾ ಭಾವುಕ ಪೋಸ್ಟ್

TAGGED:Actor Darshan's wife Vijayalakshmison allowed to meet
Share This Article
Facebook Twitter Copy Link Print
Previous Article Srividya Raj ನೆಮ್ಮದಿಯಾಗಿರೋದಕ್ಕೆ ದೇವರು ಬಿಡೋದಿಲ್ಲ : ಶ್ರೀವಿದ್ಯಾ ಭಾವುಕ ಪೋಸ್ಟ್
Next Article ವಿದೇಶದಲ್ಲಿ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಅತ್ಯಾ*ಚಾರ; ಅಲೀನಾ, ಸಿಂಧು ಅರೆಸ್ಟ್!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?