Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪುತ್ರನ ಕಂಡು ದರ್ಶನ್ ಭಾವುಕ, ಪತ್ನಿಯೊಂದಿಗೂ ಚರ್ಚೆ
ಪ್ರಮುಖಮನರಂಜನೆ

ಪುತ್ರನ ಕಂಡು ದರ್ಶನ್ ಭಾವುಕ, ಪತ್ನಿಯೊಂದಿಗೂ ಚರ್ಚೆ

Share
2 Min Read
SHARE

newsics.com/ನ್ಯೂಸಿಕ್ಸ್

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಮಂಗಳವಾರ ಸಂಜೆ ಭೇಟಿ ಮಾಡಿ, ಕೆಲಕಾಲ ಮಾತುಕತೆ ನಡೆಸಿದರು.

ಪುತ್ರನನ್ನು ಕಂಡು ದರ್ಶನ್ ಭಾವುಕರಾದರು. ಮನೆಯಿಂದ ತಂದಿದ್ದ ಹಣ್ಣುಗಳನ್ನು ದರ್ಶನ್‌ಗೆ ಪತ್ನಿ ನೀಡಿದರು.

“ದರ್ಶನ್ ಅವರನ್ನು ಮದುವೆಯಾಗಿ ಮೇ 19ಕ್ಕೆ 23 ವರ್ಷ ತುಂಬಲಿದೆ. ಹೀಗಾಗಿ, ಅವರನ್ನು ಹತ್ತಿರದಿಂದ ಭೇಟಿಗೆ ಅವಕಾಶ ಕಲ್ಪಿಸಿ’ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್‌ಗೆ ವಿಜಯಲಕ್ಷ್ಮಿ ಪತ್ರ ಬರೆದಿದ್ದರು. ಆ ಪತ್ರವನ್ನು ಜೈಲಿನ ಮುಖ್ಯ ಅಧೀಕ್ಷಕ ಅಂಶುಕುಮಾರ್‌ಗೆ ಡಿಜಿಪಿ ಕಳುಹಿಸಿ, ನಿಯಮಾವಳಿಯಂತೆ ಕ್ರಮಕ್ಕೆ ಸೂಚಿಸಿದ್ದರು.

“ಜೈಲಿನ ಕೈಪಿಡಿಯಂತೆ ಭೇಟಿಗೆ ಅವಕಾಶ ಕಲ್ಪಿಸಲಾಗಿತ್ತು. ದರ್ಶನ್ ಅವರು ಪತ್ನಿ ಹಾಗೂ ಪುತ್ರನ ಜತೆಗೆ ಕೆಲ ಸಮಯ ಮಾತುಕತೆ ನಡೆಸಿದರು. ವಿಜಯಲಕ್ಷ್ಮಿ ಅವರು ದರ್ಶನ್‌ಗೆ ಧೈರ್ಯ ಹೇಳಿ ಹೊರಟರು’ ಎಂದು ಮೂಲಗಳು ಹೇಳಿವೆ.

ವಾರ್ಷಿಕೋತ್ಸವವಿದ್ದು, ಪತ್ನಿ ಮತ್ತು ಪುತ್ರನ ಭೇಟಿಗೆ ಅವಕಾಶ ನೀಡಬೇಕು. ಕುಟುಂಬಸ್ಥರು ಭೇಟಿಗೆ ಬಂದರೂ ಸರಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ಜೈಲಿನಲ್ಲಿರುವ ಕಬ್ಬಿಣದ ಗ್ರಿಲ್ ಅಡ್ಡ ಬರುತ್ತಿದೆ. ಆದ್ದರಿಂದ ಈ ಬಾರಿ ಕೊಠಡಿ ಒಳಗೆ ಮಾತುಕತೆ ಮತ್ತು ಭೇಟಿಗೆ ಅವಕಾಶ ಮಾಡಿಕೊಡಿ’ ಎಂದು ದರ್ಶನ್ ಅವರೂ ಜೈಲಿನ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.

2024ರ ಜೂನ್ 8ರಂದು ರೇಣುಕಸ್ವಾಮಿ ಅವರ ಕೊಲೆ ನಡೆದಿತ್ತು. ಆ ಪ್ರಕರಣದಲ್ಲಿ ದರ್ಶನ್, ಪವಿತ್ರಾಗೌಡ ಸೇರಿದಂತೆ ಹಲವರನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದರು. ಅದಾದ ಮೇಲೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಉಳಿದವರೂ ಸಹ ರಾಜ್ಯದ ಬೇರೆ ಬೇರೆ ಕಾರಾಗೃಹಗಳಿಂದ ಬಿಡುಗಡೆ ಆಗಿದ್ದರು. ನಂತರ, ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರಿಂ ಕೋರ್ಟ್‌ನಲ್ಲಿ ಬೆಂಗಳೂರು ಪೊಲೀಸರು ಮೇಲ್ಮನವಿ ಸಲ್ಲಿಸಿದ್ದರು.

ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನು ಆದೇಶವನ್ನು 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿತ್ತು. ಅದರ ಬೆನ್ನಲ್ಲೇ ನಟ ದರ್ಶನ್, ಅವರ ಗೆಳತಿ ಪವಿತ್ರಾಗೌಡ ಸೇರಿ ಏಳು ಮಂದಿಯನ್ನು ನಗರ ಪೊಲೀಸರು ಬಂಧಿಸಿದ್ದರು.

‘ಈ ಬೆಳವಣಿಗೆಯ ಬಳಿಕ ದರ್ಶನ್ ಅವರನ್ನು ಭೇಟಿ ಮಾಡಲು ಕುಟುಂಬಸ್ಥರಿಗೆ ಪದೇ ಪದೇ ಅವಕಾಶ ಲಭಿಸುತ್ತಿಲ್ಲ. ಜೈಲಿನ ನಿಯಮಾವಳಿ ಪ್ರಕಾರವೇ ಭೇಟಿಗೆ ಅವಕಾಶ ಕಲ್ಪಿಸಲಾಗುತ್ತಿದೆ’ ಎಂದು ಜೈಲಿನ ಮೂಲಗಳು ತಿಳಿಸಿವೆ.

ಕಾವೂರಿನ ಬಾವಿಗಳಲ್ಲಿ ಡೀಸೆಲ್ ಅಂಶ ಪತ್ತೆ

TAGGED:Darshan gets emotional after seeing his sondiscusses it with his wife
Share This Article
Facebook Twitter Copy Link Print
Previous Article ಕಾವೂರಿನ ಬಾವಿಗಳಲ್ಲಿ ಡೀಸೆಲ್ ಅಂಶ ಪತ್ತೆ
Next Article ವಿಜಯಪುರದಲ್ಲಿ ಭೂಕಂಪನ ಅನುಭವ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?