Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಮೋದಿಯವರನ್ನು ಪ್ರಶ್ನಿಸಿದ ಬೆನ್ನಲ್ಲೇ ಪತ್ರಕರ್ತೆಯ ಸಾಮಾಜಿಕ ಖಾತೆಗಳನ್ನು ಬ್ಲಾಕ್ ಮಾಡಿದ ಮೆಟಾ
ವೈರಲ್

ಮೋದಿಯವರನ್ನು ಪ್ರಶ್ನಿಸಿದ ಬೆನ್ನಲ್ಲೇ ಪತ್ರಕರ್ತೆಯ ಸಾಮಾಜಿಕ ಖಾತೆಗಳನ್ನು ಬ್ಲಾಕ್ ಮಾಡಿದ ಮೆಟಾ

Share
2 Min Read
SHARE

ನಾರ್ವೆ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಪ್ರಶ್ನಿಸಲು ಯತ್ನಿಸಿ ಸುದ್ದಿಯಾಗಿದ್ದ ನಾರ್ವೆಯ ಹಿರಿಯ ಮಹಿಳಾ ಪತ್ರಕರ್ತೆಯ ಸಾಮಾಜಿಕ ಜಾಲತಾಣಗಳ ಖಾತೆಯನ್ನು ಮಾರ್ಕ್ ಜುಕರ್‌ಬರ್ಗ್ ಒಡೆತನದ ‘ಮೆಟಾ’ ಸಂಸ್ಥೆ ದಿಢೀರ್ ಆಗಿ ಬ್ಲಾಕ್ ಮಾಡಿದೆ.

ತಮ್ಮ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಖಾತೆಗಳು ಬ್ಲಾಕ್ ಆಗಿರುವ ಕುರಿತು ಸ್ವತಃ ಪತ್ರಕರ್ತೆಯೇ ಎಕ್ಸ್ (ಟ್ವಿಟರ್) ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ನಾರ್ವೆಯ ಓಸ್ಲೋ ನಗರದಿಂದ ಪ್ರಕಟವಾಗುವ ‘ಡಾಗ್‌ಸಾವಿಸೆನ್’ ದಿನಪತ್ರಿಕೆಯ ವರದಿಗಾರ್ತಿ ಹೆಲ್ಲೆ ಲಿಂಗ್ ಈ ಆರೋಪ ಮಾಡಿದವರು. ಇತ್ತೀಚೆಗೆ ಓಸ್ಲೋದಲ್ಲಿ ನಡೆದ ಭಾರತ-ನಾರ್ಡಿಕ್ ಶೃಂಗಸಭೆಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಮೋದಿ ಮತ್ತು ನಾರ್ವೆ ಪ್ರಧಾನಿ ಜೊತೆಯಾಗಿ ಭಾಗವಹಿಸಿದ್ದರು. ಈ ವೇಳೆ ಭಾರತದ ವಿದೇಶಾಂಗ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲೇ ಹೆಲ್ಲೆ ಲಿಂಗ್ ಅವರು ಪ್ರಧಾನಿ ಮೋದಿಯವರನ್ನು ಪ್ರಶ್ನಿಸಲು ಮುಂದಾಗಿದ್ದರು.

ತಾವು ಮೋದಿಯವರನ್ನು ಪ್ರಶ್ನಿಸಲು ಯತ್ನಿಸಿದ ವಿಡಿಯೋವನ್ನು ಹಂಚಿಕೊಂಡಿದ್ದ ಹೆಲ್ಲೆ, “ವಿಶ್ವದಲ್ಲೇ ಅತ್ಯಂತ ಮುಕ್ತ ಪತ್ರಿಕಾ ಸ್ವಾತಂತ್ರ್ಯ ಹೊಂದಿರುವ ನಾರ್ವೆಯ ಪತ್ರಕರ್ತರ ಪ್ರಶ್ನೆಗಳಿಗೆ ಭಾರತದ ಪ್ರಧಾನಿ ಏಕೆ ಉತ್ತರಿಸುತ್ತಿಲ್ಲ? ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ನಾರ್ವೆ ಮೊದಲ ಸ್ಥಾನದಲ್ಲಿದ್ದರೆ, ಭಾರತ 157ನೇ ಸ್ಥಾನದಲ್ಲಿದೆ. ನಮ್ಮೊಂದಿಗೆ ಸಹಕರಿಸುವ ಜಾಗತಿಕ ನಾಯಕರನ್ನು ಪ್ರಶ್ನಿಸುವುದು ನಮ್ಮ ಕರ್ತವ್ಯ” ಎಂದು ಬರೆದುಕೊಂಡಿದ್ದರು. ಈ ವಿಡಿಯೋ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ಆದರೆ ಈ ವಿಡಿಯೋ ವೈರಲ್ ಆದ ಮರುದಿನವೇ ಅಂದರೆ ಮೇ 19 ರಂದು ಮೆಟಾ ಸಂಸ್ಥೆಯು ಹೆಲ್ಲೆ ಲಿಂಗ್ ಅವರ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳನ್ನು ಅಮಾನತುಗೊಳಿಸಿದೆ. “ನಿಮ್ಮ ಖಾತೆಯನ್ನು ಅಮಾನತುಗೊಳಿಸಲಾಗಿದೆ, ಅಪೀಲು ಸಲ್ಲಿಸಲು 180 ದಿನಗಳ ಅವಕಾಶವಿದೆ” ಎಂಬ ಸಂದೇಶವಿರುವ ಸ್ಕ್ರೀನ್‌ಶಾಟ್ ಅನ್ನು ಅವರು ಹಂಚಿಕೊಂಡಿದ್ದಾರೆ. ತಮಗೆ ಪ್ರತಿಕ್ರಿಯೆ ನೀಡುತ್ತಿದ್ದ ಸಾವಿರಾರು ಭಾರತೀಯರಿಗೆ ಉತ್ತರಿಸಲು ಈಗ ಸಾಧ್ಯವಾಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮೆಟಾ ಸಂಸ್ಥೆಯು ಈ ಖಾತೆಗಳನ್ನು ಏಕೆ ಅಮಾನತು ಮಾಡಿದೆ ಎಂಬ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಜಾಗತಿಕ ವೇದಿಕೆಯಲ್ಲಿ ಭಾರತದ ಪ್ರಧಾನಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನಿಸಿದ ಪತ್ರಕರ್ತೆಯ ಖಾತೆಗಳು ಜಾಲತಾಣದ ನಿಯಮಗಳನ್ನು ಉಲ್ಲಂಘಿಸಿರುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಈ ಜಾಲತಾಣಗಳ ಖಾತೆಗಳ ನಿಷೇಧದ ಸುದ್ದಿ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

 

https://x.com/HelleLyngSvends/status/2056832953812918541?ref_src=twsrc%5Etfw%7Ctwcamp%5Etweetembed%7Ctwterm%5E2056832953812918541%7Ctwgr%5Ef39d246aa240e311300cb1e7ef3c99882aeb8cf8%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ಡೆತ್​ನೋಟ್​ ಬರೆದಿಟ್ಟು ಮಂಡ್ಯದ ಬಾಲೆಯರು ಕಣ್ಮರೆ

TAGGED:Meta blocks journalist's social media accounts after questioning Modi
Share This Article
Facebook Twitter Copy Link Print
Previous Article ಡೆತ್​ನೋಟ್​ ಬರೆದಿಟ್ಟು ಮಂಡ್ಯದ ಬಾಲೆಯರು ಕಣ್ಮರೆ
Next Article ASTRO ನಾಳೆ ವೃದ್ಧಿ, ಗಂಡ ಯೋಗ: ಈ ಐದು ರಾಶಿಯವರಿಗೆ ಭಾರೀ ಅದೃಷ್ಟ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?