Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alert ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ: ಮುಂಗಾರು ವಿಳಂಬ ಸಾಧ್ಯತೆ
ಕರ್ನಾಟಕಪ್ರಮುಖ

Rain alert ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ: ಮುಂಗಾರು ವಿಳಂಬ ಸಾಧ್ಯತೆ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಆರೆಂಜ್ ಅಲರ್ಟ್ ಘೋಷಿತ 11 ಜಿಲ್ಲೆಗಳು :

ಭಾರೀ ಮಳೆಯ ಸಾಧ್ಯತೆಯಿರುವ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ: ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ.

ಯೆಲ್ಲೋ ಅಲರ್ಟ್ ಘೋಷಿತ 17 ಜಿಲ್ಲೆಗಳು:

ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆಯಿರುವ ಉಳಿದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ.

ಸಾರ್ವಜನಿಕರಿಗೆ ಎಚ್ಚರಿಕೆ

ಹವಾಮಾನ ಇಲಾಖೆಯು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವವರು, ಹಳೆಯ ಕಟ್ಟಡಗಳಲ್ಲಿ ಇರುವವರು ಹೆಚ್ಚು ಜಾಗರೂಕರಾಗಿರಬೇಕು. ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ನಿಲ್ಲುವುದು ಸಾಮಾನ್ಯವಾಗಿದೆ. ವಾಹನ ಸವಾರರು ಸಂಚಾರ ಮಾಡುವಾಗ ವಿಶೇಷ ಗಮನ ಹರಿಸಿ. ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲುವುದನ್ನು ತಪ್ಪಿಸಿ.

ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಲು ಮತ್ತು ಮೋಡದ ವಾತಾವರಣವಿರುತ್ತದೆ. ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಕಾಣಿಸುತ್ತಿದೆ.

ಮುಂಗಾರು ನಿರೀಕ್ಷೆ

ಉತ್ತರ ಹಿಂದೂ ಮಹಾಸಾಗರ ಮತ್ತು ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳಿಗೆ ಪೂರಕ ವಾತಾವರಣ ಇಲ್ಲದಿರುವುದರಿಂದ ಮುಂಗಾರು ಮುಂದುವರಿಕೆಗೆ ಅಡ್ಡಿಯಾಗಿದೆ. ಮೇ 30ರ ಸುಮಾರಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳು ಕ್ಷೀಣಿಸುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾರ್ವಜನಿಕರಿಗೆ ಸಲಹೆಗಳು

  • ಅನಗತ್ಯವಾಗಿ ಹೊರಗೆ ಸಂಚರಿಸಬೇಡಿ
  • ಪ್ರವಾಸ ಯೋಜಿಸುವವರು ಹವಾಮಾನ ವರದಿ ಪರಿಶೀಲಿಸಿ
  • ಮಕ್ಕಳು ಮತ್ತು ವೃದ್ಧರ ಆರೋಗ್ಯದತ್ತ ವಿಶೇಷ ಗಮನ ಹರಿಸಿ
  • ವಿದ್ಯುತ್ ಕಂಬಗಳ ಬಳಿ ಮತ್ತು ಮರಗಳ ಕೆಳಗೆ ನಿಲ್ಲಬೇಡಿ.

Monkeys stop the bus ಬಿಸಿಲಿಗೆ ಬಸವಳಿದ ಕೋತಿಗಳು: ಬಸ್ ನಿಲ್ಲಿಸಿ ವಾನರ ಪಡೆ ಮಾಡಿದ್ದೇನು? ವಿಡಿಯೋ ನೋಡಿ

TAGGED:Heavy rains in many parts of the state in the next 48 hours: Monsoon likely to be delayed
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿ‌ನ ಪಂಚಾಂಗ/ರಾಶಿ‌ ಭವಿಷ್ಯ, 22-05-2026, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಕಾರಿನೊಳಗೆ ನಕಲಿ ಮದುವೆ ಜೋಡಿ, ಚೆಕ್​ ಮಾಡಿದಾಗ ಪೊಲೀಸರಿಗೆ ಸಿಕ್ಕಿದ್ದೇ ಬೇರೆ!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?