Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗುವುದಾಗಿ ನಂಬಿಸಿ ಹತ್ತಕ್ಕೂ ಹೆಚ್ಚು ಯುವತಿಯರಿಗೆ ವಂಚನೆ!
ಕರ್ನಾಟಕಪ್ರಮುಖ

ಮದುವೆಯಾಗುವುದಾಗಿ ನಂಬಿಸಿ ಹತ್ತಕ್ಕೂ ಹೆಚ್ಚು ಯುವತಿಯರಿಗೆ ವಂಚನೆ!

Share
2 Min Read
SHARE

newsics.com/ನ್ಯೂಸಿಕ್ಸ್

ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ತಾನು ಪಿಎಚ್‌ಡಿ (PhD) ಪದವೀಧರ, ಡಾಕ್ಟರ್ ಎಂದು ಸುಳ್ಳು ಪ್ರೊಫೈಲ್ ಸೃಷ್ಟಿಸಿ, ಮದುವೆಯಾಗುವುದಾಗಿ ನಂಬಿಸಿ ಮೈಸೂರು ಮತ್ತು ಬೆಂಗಳೂರಿನ ಹತ್ತಕ್ಕೂ ಹೆಚ್ಚು ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಈ ವಂಚನೆ ಜಾಲದ ಸೂತ್ರಧಾರ ಪ್ರದೀಪ್ ಸೋಲೋಮನ್ ಹಾಗೂ ಆತನಿಗೆ ಸಾತ್ ನೀಡಿದ ತಾಯಿ ಕಲಾವತಿ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರ ಬಂಧನ ಭೀತಿಯಲ್ಲಿ ಅಮ್ಮ-ಮಗ ಇಬ್ಬರೂ ಎಸ್ಕೇಪ್ ಆಗಿದ್ದಾರೆ.

ಆರೋಪಿ ಪ್ರದೀಪ್ ಸೋಲೋಮನ್ ಮ್ಯಾಟ್ರಿಮೋನಿಯಲ್ ಸೈಟ್‌ಗಳಲ್ಲಿ ‘ಡಾ. ಪ್ರದೀಪ್ ಸೋಲೋಮನ್’ ಹೆಸರಿನಲ್ಲಿ ಹೈ-ಫೈ ಪ್ರೊಫೈಲ್ ತೆರೆದಿದ್ದನು. ಮಗನ ಈ ವಂಚನೆ ಆಟಕ್ಕೆ ತಾಯಿ ಕಲಾವತಿ ಕೂಡ ಸಂಪೂರ್ಣ ಸಾತ್ ನೀಡಿದ್ದಳು. ಇವರಿಬ್ಬರು ಮೈಸೂರಿನಲ್ಲಿ ದೊಡ್ಡದೊಂದು ಐಷಾರಾಮಿ ಬಂಗಲೆಯನ್ನು ಬಾಡಿಗೆಗೆ ಪಡೆದು, ತಾವು ದೊಡ್ಡ ಶ್ರೀಮಂತರು ಎಂಬಂತೆ ಸಮಾಜದಲ್ಲಿ ಬಿಲ್ಡಪ್ ಕೊಡುತ್ತಿದ್ದರು. ಈ ಬಂಗಲೆ ಮತ್ತು ಅವರ ಲೈಫ್‌ಸ್ಟೈಲ್ ನೋಡಿ ಮದುವೆ ಸಂಬಂಧ ಬೆಳೆಸಲು ಮುಂದೆ ಬರುವ ವಧುವಿನ ಕುಟುಂಬಸ್ಥರನ್ನು ತಮ್ಮ ಬಣ್ಣದ ಮಾತುಗಳ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು.

ಯುವತಿಯರ ಕುಟುಂಬದ ನಂಬಿಕೆ ಗಳಿಸಿದ ನಂತರ, “ನನ್ನ ದೊಡ್ಡ ಮೊತ್ತದ ಹಣ ತಾಂತ್ರಿಕ ಕಾರಣಗಳಿಂದ ಬ್ಯಾಂಕ್‌ನಲ್ಲಿ ಸ್ಟ್ರಕ್ (Stuck) ಆಗಿದೆ, ಇನ್ನು ಕೆಲವೇ ದಿನಗಳಲ್ಲಿ ಹಣ ವಾಪಸ್ ಬರುತ್ತದೆ, ಸದ್ಯಕ್ಕೆ ಅರ್ಜೆಂಟ್ ಇದೆ” ಎಂದು ಹೇಳಿ ಲಕ್ಷ ಲಕ್ಷ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದನು. ಪ್ರದೀಪನ ಮಾತು ನಂಬಿ ಇತ್ತೀಚೆಗೆ ಬೆಂಗಳೂರು ಮೂಲದ ಶ್ರೀಮಂತ ಕುಟುಂಬವೊಂದು ಲಕ್ಷಾಂತರ ರೂಪಾಯಿ ಹಣ ನೀಡಿ ವಂಚನೆಗೊಳಗಾಗಿದೆ. ಹಣ ಕೈ ಸೇರಿದ ಬೆನ್ನಲ್ಲೇ ಅಮ್ಮ-ಮಗ ಇಬ್ಬರೂ ನಾಪತ್ತೆಯಾಗಿದ್ದಾರೆ.

ಪ್ರದೀಪ್ ಕೈಯಲ್ಲಿ ಮೋಸ ಹೋದ ಮೈಸೂರು ಮತ್ತು ಬೆಂಗಳೂರಿನ ಹಲವು ಯುವತಿಯರು ಹಾಗೂ ಅವರ ಕುಟುಂಬಸ್ಥರು ಈಗ ಮೈಸೂರಿನ ಆ ಬಂಗಲೆಯ ಮುಂದೆ ಬಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಇತ್ತ ಅಡುಗೋಡಿ ಪೊಲೀಸರು ಕಳೆದ ಎರಡು ದಿನಗಳಿಂದ ವಂಚಕ ಅಮ್ಮ-ಮಗನಿಗಾಗಿ ತೀವ್ರ ಶೋಧ ಕಾರ್ಯ (ತಲಾಶ್) ನಡೆಸುತ್ತಿದ್ದಾರೆ. ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಈ ಖತರ್ನಾಕ್ ಜೋಡಿಯ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

 

ಮಗುವಿನ ಆರೋಗ್ಯಕ್ಕೆ ಅಪ್ಪನೂ ಕಾರಣ: ಸಂಶೋಧನೆಯಿಂದ ಬಯಲಾದ ಆಘಾತಕಾರಿ ಸತ್ಯ!

TAGGED:More than ten young women were deceived by the promise of marriage!
Share This Article
Facebook Twitter Copy Link Print
Previous Article ಮಗುವಿನ ಆರೋಗ್ಯಕ್ಕೆ ಅಪ್ಪನೂ ಕಾರಣ: ಸಂಶೋಧನೆಯಿಂದ ಬಯಲಾದ ಆಘಾತಕಾರಿ ಸತ್ಯ!
Next Article ಮದುವೆಯನ್ನು ರೊಮ್ಯಾಂಟಿಕ್ ಮಾಡ್ಕೋಬೇಡಿ; ನಟಿ ರಿಧಿ ಡೋಗ್ರಾ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?